ಕೆ.ಎನ್.ಪಿ.ವಾರ್ತೆ,ಗಂಗಾವತಿ,ಮೇ.01;

ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿಯು ಆ ದೇಶದ ಕಾರ್ಮಿಕರ ಮೇಲೆ ಅವಲಂಬಿತವಾಗಿರುತ್ತದೆ. ದಕ್ಷತೆಯಿಂದ ಕೂಡಿದ ಕಾರ್ಮಿಕರ ವರ್ಗದಿಂದ ಮಾತ್ರ ಆ ದೇಶ ಆರ್ಥಿಕ ಪ್ರಗತಿಯನ್ನು ಸಾಧಿಸುತ್ತಿರುತ್ತದೆ.

ಕೈಗಾರಿಕಾ ಕ್ರಾಂತಿಯ ನಂತರ ಅದರ ಫಲವಾಗಿ ಸಮಾಜದಲ್ಲಿ ಎರಡು ವರ್ಗಗಳು ಉದಯವಾದವು. ಒಂದು ಬಂಡವಾಳಶಾಹಿ (ಶ್ರೀಮಂತರು) ವರ್ಗ ಹಾಗೂ ಇನ್ನೊಂದು ಕಾರ್ಮಿಕ (ಬಡವರು) ವರ್ಗ. ಬಂಡವಾಳಶಾಹಿಗಳು ಕಾರ್ಮಿಕರ ಮೇಲೆ ನಿರಂತರವಾಗಿ ಶೋಷಣೆ ಮಾಡುತ್ತಿದ್ದು, ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಪ್ರಯತ್ನ ನಡೆಯುತ್ತಿದೆ.

ವಿಶ್ವದ ಕಾರ್ಮಿಕರೆಲ್ಲರೂ ಒಂದಾಗಬೇಕು. ಶೋಷಣೆಯ ಸಂಕೋಲೆಗಳನ್ನು ಕಿತ್ತೆಸೆಯಬೇಕು ಎಂಬ ಶಕ್ತಿಶಾಲಿ ಸಂದೇಶವನ್ನು ಹೊತ್ತ ಕಾರ್ಮಿಕ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಪಂಪಣ್ಣಾ ನಾಯಕ, ವೀರಕನ್ನಡಿಗರ ಕರ್ನಾಟಕ ರಕ್ಷಣ ವೇದಿಕೆಯ ರಾಜ್ಯಾಧ್ಯಕ್ಷರಾದ ಅರ್ಜುನ್ ನಾಯಕ, ಧೀರ ಕನ್ನಡಿಗರ ಕರ್ನಾಟಕ ರಕ್ಷಣ ವೇದಿಕೆಯ ರಾಜ್ಯಾಧ್ಯಕ್ಷರಾದ ವಿರುಪಾಕ್ಷ ಗೌಡ ನಾಯಕ ರವರು ಶುಭಾಶಯಗಳನ್ನು ಕೋರಿದ್ದಾರೆ.

ಕಾರ್ಮಿಕರ ದಿನಾಚರಣೆ : ಶುಭಾಶಯ ಕೋರಿದ ಕರವೇ ಅಧ್ಯಕ್ಷರು

– ಪಂಪಣ್ಣಾ ನಾಯಕ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರು

ಕಾರ್ಮಿಕರ ಮೇಲೆಯೇ ಅವಲಂಭಿತವಾಗಿ ಭಾರತ ನಿಂತಿದೆ. ಕಾರ್ಮಿಕರ ಶ್ರಮವಿಲ್ಲದೆ ಕಾರ್ಖಾನೆ, ಉದ್ಯಮ ಯಶಸ್ವಿಯಾಗಲು ಸಾಧ್ಯವಿಲ್ಲ, ಕಾರ್ಮಿಕರಿಗೆ ಸರ್ಕಾರ ಒತ್ತುನೀಡಿ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕು, ವಿಶ್ವ ಕಾರ್ಮಿಕ ದಿನದ ಶುಭಾಶಯಗಳು…

 

ಕಾರ್ಮಿಕರ ದಿನಾಚರಣೆ : ಶುಭಾಶಯ ಕೋರಿದ ಕರವೇ ಅಧ್ಯಕ್ಷರು

– ಅರ್ಜುನ್ ನಾಯಕ, ವೀರಕನ್ನಡಿಗರ ಕರ್ನಾಟಕ ರಕ್ಷಣ ವೇದಿಕೆಯ ರಾಜ್ಯಾಧ್ಯಕ್ಷರು

ಕಾರ್ಮಿಕರಿಲ್ಲದ ಬದುಕಿಲ್ಲ. ಪ್ರತಿಯೊಂದು ಹಂತದಲ್ಲಿಯು ಕಾರ್ಮಿಕರ ಸೇವೆ ಅಮೂಲ್ಯವಾದದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕರಿಗೆ ಒತ್ತು ನೀಡಬೇಕು. ಹಾಗೂ ಕಾರ್ಮಿಕರ ಕುಟುಂಬಕ್ಕೆ ಜೀವನೋಪಾಯಕ್ಕೆ ಸಹಕರಿಸಬೇಕು. ವಿಶ್ವ ಕಾರ್ಮಿಕರ ದಿನದ ಶುಭಾಶಯಗಳು…

 

– ವಿರುಪಾಕ್ಷ ಗೌಡ ನಾಯಕ, ಧೀರ ಕನ್ನಡಿಗರ ಕರ್ನಾಟಕ ರಕ್ಷಣ ವೇದಿಕೆಯ ರಾಜ್ಯಾಧ್ಯಕ್ಷರು

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಅನುದಾನ ಹಾಗೂ ಸೌಲಭ್ಯಗಳನ್ನು ಕಾರ್ಮಿಕರಿಗೆ ಸರಿಯಾಗಿ ಒದಗಿಸಬೇಕು ಹಾಗೂ ಕಾರ್ಮಿಕರ ಕುಂದು ಕೊರತೆಗಳನ್ನು ಸರ್ಕಾರ ಮನಗಂಡು ಅವರ ಏಳಿಗೆಗೆ ಶ್ರಮಿಸಬೇಕು. ವಿಶ್ವ ಕಾರ್ಮಿಕರ ದಿನದ ಶುಭಾಶಯಗಳು…

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.