ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.03;
 
15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಗುರುವಾರ ಮತದಾನ ನಡೆಯಲಿದ್ದು ಬುಧವಾರ ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದಾಗಿದೆ.
 
ಜೆಡಿಎಸ್‌ನ ಮೂವರು ಹಾಗೂ ಕಾಂಗ್ರೆಸ್‌ನ 14 ಮಂದಿ ಶಾಸಕರು ರಾಜೀನಾಮೆ ನೀಡಿದ್ದರಿಂದ ತೆರವಾದ 15 ಕ್ಷೇತ್ರಗಳಿಗೆ (2 ಕ್ಷೇತ್ರ ಚುನಾವಣೆ ಬಾಕಿ) ಚುನಾವಣೆ ನಡೆಯುತ್ತಿದ್ದು ಕಳೆದ 10 ದಿನಗಳಿಗೂ ಹೆಚ್ಚು ಕಾಲದಿಂದ ನಡೆದ ಅಬ್ಬರದ ಪ್ರಚಾರ ಮಂಗಳವಾರ ಅಂತ್ಯಗೊಳ್ಳಲಿದೆ.
 
ಪ್ರಚಾರಕ್ಕೆ ಮಂಗಳವಾರ ಕಡೆಯ ದಿನವಾಗಿರುವುದರಿಂದ ಬಹುತೇಕ ಅಭ್ಯರ್ಥಿಗಳು ಕ್ಷೇತ್ರವ್ಯಾಪ್ತಿ ರೋಡ್‌ಶೋನೊಂದಿಗೆ ಪ್ರಚಾರ ಅಂತ್ಯಗೊಳಿಸುವ ಸಾಧ್ಯತೆಗಳಿವೆ. ಡಿಸೆಂಬರ್ 5ರಂದು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು ಮತ ಎಣಿಕೆಯು ಡಿ.9ರಂದು ನಡೆಯಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.