ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.22;

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಸ್ಥರಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಮೃತರ ಕುಟುಂಬಸ್ಥರಿಗೆ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕಳೆದ ಗುರುವಾರ ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಬೆಂಗ್ರೆ ನಿವಾಸಿ 23 ವರ್ಷದ ನೌಶೀನ್ ಮತ್ತು 49 ವರ್ಷದ ಜಲೀಲ್ ಎಂಬುವರು ಮೃತಪಟ್ಟಿದ್ದಾರೆ.

ಮೃತಪಟ್ಟ ಕುಟುಂಬಸ್ಥರಿಗೆ ರಾಜ್ಯ ಸರಕಾರ ಪರಿಹಾರ ನೀಡಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮಧ್ಯೆಯೇ ಸಿಎಂ ಯಡಿಯೂರಪ್ಪ ಪರಿಹಾರವನ್ನು ಘೋಷಿಸಿದ್ದಾರೆ.

ಸದ್ಯ, ಮಂಗಳೂರು ಸಹಜ ಸ್ಥಿತಿಗೆ ಮರಳಿದ್ದು, ಪರಿಸ್ಥಿತಿ ಶಾಂತವಾಗಿದೆ. ಭಾನುವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ಫ್ಯೂ ಸಡಿಲಿಕೆಯಾಗಿದೆ. ಅಲ್ಲದೆ, ಇಂಟರ್‌ನೆಟ್‌ ಸೇವೆ ಸಹ ಮತ್ತೆ ಪುನಾರಂಭವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.