ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.22;

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ನವೆಂಬರ್ 19ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

2020ರ ಮಾರ್ಚ್ 20ರಿಂದ ಏಪ್ರಿಲ್ 3ರ ವರೆಗೆ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ವೇಳಾಪಟ್ಟಿಗೆ ಆಕ್ಷೇಪಣೆಗಳಿದ್ದರೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಚೇರಿಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿ :

  • ಮಾರ್ಚ್ 20 : ಪ್ರಥಮ ಭಾಷೆ ಕನ್ನಡ/ತೆಲುಗು/ಹಿಂದಿ/ಮರಾಠಿ/ತಮಿಳು/ಉರ್ದು/ಇಂಗ್ಲಿಷ್‌/ಸಂಸ್ಕೃತ
  • ಮಾರ್ಚ್ 21 : ಕೋರ್‌ ವಿಷಯ (ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ) ತೆಗೆದುಕೊಂಡವರಿಗೆ ಪರೀಕ್ಷೆ
  • ಮಾರ್ಚ್ 23 : ಸಮಾಜ ವಿಜ್ಞಾನ
  • ಮಾರ್ಚ್ 26 : ವಿಜ್ಞಾನ
  • ಮಾರ್ಚ್ 30 : ಗಣಿತ
  • ಏಪ್ರಿಲ್  01 : ದ್ವಿತೀಯ ಭಾಷೆ ಇಂಗ್ಲಿಷ್‌/ಕನ್ನಡ
  • ಏಪ್ರಿಲ್ 03 : ತೃತೀಯ ಭಾಷೆ ಹಿಂದಿ/ಕನ್ನಡ/ಇಂಗ್ಲಿಷ್‌/ ಅರೇಬಿಕ್‌/ಪರ್ಷಿಯನ್‌/ಉರ್ದು/ಸಂಸ್ಕೃತ/ಕೊಂಕಣಿ/ತುಳು

ಪ್ರಥಮ ಭಾಷೆಗೆ ಗರಿಷ್ಠ 100 ಅಂಕ, ಉಳಿದ ವಿಷಯಗಳಿಗೆ ಗರಿಷ್ಠ 80 ಅಂಕಗಳಂತೆ ಪರೀಕ್ಷೆ ನಡೆಯಲಿದೆ. ಆದರೆ, ಸಿಸಿಇ ಖಾಸಗಿ, ಪುನರಾವರ್ತಿತ ಮತ್ತಿತರ ಅಭ್ಯರ್ಥಿಗಳಿಗೆ ಮಾತ್ರ ಪ್ರಥಮ ಭಾಷೆಗೆ 125, ಇತರ ವಿಷಯಗಳಿಗೆ 100 ಅಂಕಗಳಂತೆ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 4 ರಿಂದ 19 ತನಕ ಈ ಬಾರಿಯ ಪರೀಕ್ಷೆಗಳು ನಡೆಯಲಿವೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.