ಕೆ.ಎನ್.ಪಿ.ವಾರ್ತೆ,ನರೇಗಲ್ಲ,ಜೂ.21;

ಕನ್ನಡ ಸಾಹಿತ್ಯ ಪರಿಷತ್ತಿನ 11ನೇ ತಿಂಗಳ ಸಾಹಿತ್ಯ ಚಿಂತನಗೋಷ್ಟಿಯನ್ನು ಪಟ್ಟಣದ 5ನೇ ವಾರ್ಡಿನ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಜೂ. 22 ರಂದು ಶನಿವಾರ ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಸಾನಿಧ್ಯವನ್ನು ನರೇಗಲ್ಲ ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರ ಮಹಾಸ್ವಾಮಿಗಳು ವಹಿಸಲಿದ್ದು, ಗದಗ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥೆ ಬಿ. ಕೆ. ಜಯಂತ ಅಕ್ಕನವರು ಜೀವನದಲ್ಲಿ ಆಧ್ಯಾತ್ಮದ ಮಹತ್ವದ ಕುರಿತು ಉಪನ್ಯಾಸ ನೀಡಲಿದ್ದಾರೆ.

ರೋಣ-ಗಜೇಂದ್ರಗಡ ತಾಲ್ಲೂಕ ಕಸಾಪ ಅಧ್ಯಕ್ಷ ಈಶ್ವರಪ್ಪ ಐ. ರೇವಡಿ ಅಧ್ಯಕ್ಷತೆ ವಹಿಸಲಿದ್ದು ಅತಿಥಿಗಳಾಗಿ 5ನೇ ವಾರ್ಡಿನ ಪ.ಪಂ ಸದಸ್ಯೆ ಅಕ್ಕಮ್ಮ ಮಣ್ಣೋಡ್ಡರ, ಕಸಾಪ ಹೋಬಳಿ ಅಧ್ಯಕ್ಷ ಎಫ್.ಎನ್.ಹುಡೇದ ಹಾಗೂ ಓಣಿಯ ಹಿರಿಯರು, ಕಸಾಪ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ನರೇಗಲ್ಲ ಕಸಾಪ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಚಂದ್ರು ರಾಥೋಡ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.