ಕೆ.ಎನ್.ಪಿ.ವಾರ್ತೆ,ನರೇಗಲ್ಲ,ಏ.26;

ಕನ್ನಡ ಸಾಹಿತ್ಯ ಪರಿಷತ್ತಿನ 9ನೇ ತಿಂಗಳ ಸಾಹಿತ್ಯ ಚಿಂತನಾಗೋಷ್ಠಿಯನ್ನು ಪಟ್ಟಣದ 13ನೇ ವಾರ್ಡಿನ ಕತ್ತಿ ಮಸೂತಿಯಲ್ಲಿ ಎಪ್ರಿಲ್ 27 ರ ಶನಿವಾರ ಸಂಜೆ 5:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಸಾನಿಧ್ಯವನ್ನು ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದು. ನೆಲ, ಜಲ ಸಂರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಜಗದೀಶ ಸಂಕನಗೌಡ್ರ ಅವರು ‘ಜೀವಜಲ, ಜೀವನಾಧಾರ’ ಎಂಬ ಜಲ ಸಾಕ್ಷರತೆಯ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಕಸಾಪ ತಾಲ್ಲೂಕ ಅಧ್ಯಕ್ಷ ಐ.ಎ.ರೇವಡಿ, ಹೋಬಳಿ ಅಧ್ಯಕ್ಷ ಎಫ್.ಎನ್.ಹುಡೇದ, ವಾರ್ಡಿನ ಸದಸ್ಯ ವೀರೇಶ ಜೋಗಿ ಹಾಗೂ ವಾರ್ಡಿನ ಗುರು ಹಿರಿಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನಗಳು ಜರುಗಲಿವೆ ಎಂದು ಕಸಾಪ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಚಂದ್ರು ರಾಥೋಡ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.