ಕೆ.ಎನ್.ಪಿ.ವಾರ್ತೆ,ಬೀಳಗಿ,ಏ.17;

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿಯ 22 ಕ್ಕೂ ಹೆಚ್ಚು ಸ್ಥಾನಗಳನ್ನೊಳಗೊಂಡಂತೆ ಒಟ್ಟಾರೆ 300ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದರೊಂದಿಗೆ ಕೇಂದ್ರದಲ್ಲಿ 2ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ.

ಆನಂತರದ ಬೆಳವಣಿಗೆಯಾಗಿ ರಾಜ್ಯದಲ್ಲಿ ಸಿದ್ಧರಾಮಯ್ಯ ತಮ್ಮ ಬೆಂಬಲವನ್ನು ವಾಪಸ್ಸು ಪಡೆಯುವುದರೊಂದಿಗೆ ಮೈತ್ರಿ ಸಕಾರ ಪತನಹೊಂದಿ ಬಿಜೆಪಿ ಅಧಿಕಾರಕ್ಕೆ ಬಂದು, ಯಡಿಯೂರಪ್ಪ ಮುಖ್ಯ ಮಂತ್ರಿಯಾಗಲಿದ್ದಾರೆ. ಆಗ ಬೀಳಗಿ ಮತ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನೆಲ್ಲ ತಾವು ಖಂಡಿತವಾಗಿ ಬಗೆಹರಿಸುತ್ತೇನೆಂದು ಶಾಸಕ ಮುರುಗೇಶ ನಿರಾಣಿ ಹೇಳಿದರು.

ಪಟ್ಟಣದಲ್ಲಿ ಏಪ್ರೀಲ್ 16ರಂದು ಬಿಜೆಪಿ ಅಭ್ಯರ್ಥಿ ಪಿ.ಸಿ ಗದ್ದಿಗೌಡರ ಪರವಾಗಿ ಮತ ಪ್ರಚಾರಕ್ಕಾಗಿ ರೋಡ್‍ಶೋ ನಡೆಸಿ ಸಭೆಯಲ್ಲಿ ಮಾತಾಡಿದರು. ಸಂಜೆ ಶಿವಾಜಿ ವೃತ್ತದಿಂದ ನೂರಾರು ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಹೊರಟ ಮೆರವಣಿಗೆ ರಿಂಗರೋಡದಲ್ಲಿ ಹಾಯ್ದ ಬಸವೇಶ್ವರ ವೃತ್ತಕ್ಕೆ ಬಂದು ತಲುಪಿತು. ಅಲ್ಲಿ ಸಭೆಯನ್ನು ನಡೆಸಲಾಯಿತು. ನಂತರ ಕಂಬಾರ ಗಲ್ಲಿಯ ಮೂಲಕ ಡಾ.ಅಂಬೇಡ್ಕರ್ ವೃತ್ತಕ್ಕೆ ಬಂದು, ಅಲ್ಲಿಂದ ಮಹಾತ್ಮಾ ಗಾಂಧಿ ವೃತ್ತದ ಮೂಲಕ ಕನಕದಾಸ ವೃತ್ತಕ್ಕೆ ಬಂದು ಮುಕ್ತಾಯವಾಯಿತು.

ವರದಿ : ಬಸವರಾಜ್ ಬಾಬು ಕೋರಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.