ಕೆ.ಎನ್.ಪಿ.ವಾರ್ತೆ,ಕೊಪ್ಪಳ,ನ.05;

ಮನೆ ನಿರ್ಮಾಣ ವಿಚಾರವಾಗಿ ಬಿಜೆಪಿ ಮುಖಂಡರು ಯೋಧ ಹಾಗೂ ಆತನ ಕುಟುಂಬದವರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ನಡೆದಿದೆ.

ಯೋಧ ಹಾಗೂ ಯೋಧನ ಕುಟುಂಬದವರ ಮೇಲೆ ಬಿಜೆಪಿ ಮುಖಂಡರಾದ ಶರಣಪ್ಪ ಕಳಸಪ್ಪನವರ್ ಹಾಗೂ ಸ್ಥಳೀಯ ಗ್ರಾಪಂ ಸದಸ್ಯ ಗೂಳಪ್ಪ ದಿಂಡೂರ್ ಕಟ್ಟಿಗೆ, ಬ್ಲೆಡ್‌ನಿಂದ ನಡುರಸ್ತೆಯಲ್ಲಿ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆ ನಡೆಸಿರುವ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರಂತೆ. ಹಲ್ಲೆಯಿಂದಾಗಿ ಯೋಧ ಬಸವರಾಜ‌ ಹಾಗೂ ಅವರ ತಂದೆ ಕಳನಗೌಡ ಅವರು ರಸ್ತೆಯಲ್ಲಿ ಬಿದ್ದು ಗೋಳಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.

ಇನ್ನು ಶರಣಪ್ಪ ಹಾಗೂ ಗೂಳಪ್ಪ ದಿಂಡೂರು ಯೋಧನಿಗೆ ಧಮ್ಕಿ ಹಾಕಿದ್ದು, ನಾವು ಶಾಸಕರ ಜೊತೆ ಇರ್ತೀವಿ. ನಮ್ಮನ್ನು ಯಾರೂ ಏನೂ‌ ಮಾಡೋಕೆ ಆಗೋದಿಲ್ಲ ಎಂದು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.‌ ಹಲ್ಲೆಗೊಳಗಾದ ಯೋಧನ ಕುಟುಂಬ ದೂರು ನೀಡಿದರೂ ಕುಕನೂರು ಪೊಲೀಸರು ಯಾವುದೇ‌ ಕ್ರಮ ಕೈಗೊಂಡಿಲ್ಲ ಎಂದು ಯೋಧನ ಕುಟುಂಬಸ್ಥರು ಆರೋಪಿಸಿದ್ದಾರೆ.

ಸದ್ಯ ಯೋಧನ ಇಡೀ ಕುಟುಂಬ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಶರಣಪ್ಪ ಕಳಸಪ್ಪನವರ್ ಹಾಗೂ ಯೋಧ ಬಸವರಾಜ ಕುಟುಂಬಗಳ ನಡುವೆ ಮೊದಲಿನಿಂದಲೂ ದ್ವೇಷವಿದ್ದು, ಆಗಾಗ ಜಗಳ ನಡೆಯುತ್ತಲೇ ಇತ್ತಂತೆ. ಶುಕ್ರವಾರ ಬಸವರಾಜ ಕುಟುಂಬದವರು ಪೊಲೀಸ್ ಠಾಣೆಗೆ ಹೋದರೂ ಪ್ರಯೋಜನವಾಗಿಲ್ಲ.

ರವಿವಾರ ಸಂಜೆ ಮನೆ ನಿರ್ಮಿಸಿಕೊಳ್ಳುತ್ತಿರುವ ಯೋಧನ ಕುಟುಂಬದವರೊಂದಿಗೆ ಏಕಾಏಕಿ ತಗಾದೆ ಶುರು ಮಾಡಿದ ಶರಣಪ್ಪ, ನಮ್ಮ‌ ವಿರುದ್ಧವೇ ದೂರು ಕೊಡ್ತಿರಾ ಅಂತ ಹಿಗ್ಗಾ ಮುಗ್ಗಾ ಹಲ್ಲೆ ಮಾಡಿದ್ದಾನೆ. ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು ಎಸ್ಪಿ ಪ್ರಕರಣದ ತನಿಖೆಗಾಗಿ ತಂಡ ರಚಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.