ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಜೂ.18;

ಮೂವರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಎಂಬಲ್ಲಿ ಸೋಮವಾರ ನಡೆದಿದೆ.

ಯಲ್ಲಮ್ಮ ಎಂಬಾಕೆ ಮಕ್ಕಳಾದ ಅಕ್ಷತಾ (7), ಕಾವ್ಯಾ(4) ಮತ್ತು ನಾಗರಾಜ್‌(2) ರನ್ನು ನೀರಿನಲ್ಲಿ ಮುಳುಗಿಸಿ ಕೊಂದು ಬಳಿಕ ತಾನು ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಯಲ್ಲಮ್ಮಳ ಗಂಡ ಕುಡಿದು ಬಂದು ಗಲಾಟೆಮಾಡುತ್ತಿದ್ದ, ಗಂಡನ ಕಿರುಕುಳ ತಾಳಲಾರದೇ ಇಂತಹ ನಿರ್ಧಾರ ಕೈಗೊಂಡಿದ್ದಾಳೆ ಎಂದು ಕೆಲ ಗ್ರಾಮಸ್ಥರು ಆರೋಪಿಸಿದ್ದಾರೆ.

ಯಲ್ಲಮ್ಮಳ ಈ ಕಠಿಣ ನಿರ್ಧಾರಕ್ಕೆ ನಿಖರ ಕಾರಣವೇನೆಂಬುದು ತನಿಖೆಯಿಂದ ತಿಳಿದು ಬರಬೇಕಿದೆ ಎಂದು ಕೊಪ್ಪಳ ಎಸ್‌ಪಿ ರೇಣುಕಾ ಸುಕುಮಾರ್‌ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.