ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.30;

ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದ್ದು, ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಕಿನ್ನಾಳ ಗ್ರಾಮದ ಬಳಿ ನಡೆದಿದೆ.

ಕುಕನೂರು ತಾಲೂಕಿನ ಹಿರೇಬೀಡನಾಳ ಗ್ರಾಮದ ಸಿದ್ದಪ್ಪ ತೋಟದ ಎಂಬುವರಿಗೆ ಸೇರಿದ ಕಾರು ಬೆಂಕಿಗಾಹುತಿ ಆಗಿದೆ. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ನಿಮಿತ್ತ ನಿನ್ನೆ ತಡರಾತ್ರಿ ಕಾರಿನಲ್ಲಿ ಮಹಿಳೆಯರು ಸೇರಿ ಐವರು ಪ್ರಯಾಣಿಸುತ್ತಿದ್ದರು.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳ‌ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.