ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.27;

ಕೊಪ್ಪಳದ ವಿದ್ಯಾರ್ಥಿನಿಲಯದಲ್ಲಿ ಆ.18ರಂದು ವಿದ್ಯುತ್‌ ಅವಘಡ ಸಂಭವಿಸಿ ಐವರು ವಿದ್ಯಾರ್ಥಿಗಳು ಸಾವಿಗೀಡಾದ ಪ್ರಕರಣದ ಸಂಬಂಧ ಹೈಕೋರ್ಟ್‌ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಆಲ್‌ ಇಂಡಿಯಾ ಲಾಯರ್ಸ್‌ ಯೂನಿಯನ್‌ನ ಕಾರ್ಯದರ್ಶಿ ಶ್ರೀನಿವಾಸ್‌ ಕುಮಾರ್‌, ಸದಸ್ಯರಾದ ಪಿ.ಪಿ.ಪಿ ಬಾಬುರಾಜು ಹಾಗೂ ಆರ್‌. ಜಗನ್ನಾಥ್‌ ಬರೆದಿದ್ದ ಪತ್ರ ಆಧರಿಸಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪಿಐಎಲ್‌ ಅನ್ನು ಸಿಜೆ ಎ.ಎಸ್‌. ಓಕ್‌ ನೇತೃತ್ವದ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಿದ ಪೀಠ, ಸೆ.16ರೊಳಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ಕೋರಿ ಆಲ್‌ ಇಂಡಿಯಾ ಲಾಯರ್ಸ್‌ ಯೂನಿಯನ್‌ ಹೈಕೋರ್ಟ್‌ಗೆ ಪತ್ರ ಬರೆದು, ಪ್ರಕರಣದಲ್ಲಿ ಸಾವಿಗೀಡಾಗಿರುವ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು, ಮುಂದಿನ ದಿನಗಳಲ್ಲಿ ಇಂಥ ಅನಾಹುತಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು, ಖಾಸಗಿ ಕಟ್ಟಡಗಳಲ್ಲಿ ನಡೆಸಲಾಗುತ್ತಿರುವ ಹಾಸ್ಟೆಲ್‌ಗಳನ್ನು ಸರಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಿ, ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.