ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.30;

ಕೆ.ರತ್ನಪ್ರಭಾ ಅವರ ಸೇವಾ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆ, ಸೇವಾ ಹಿರಿತನದ ಆಧಾರದಲ್ಲಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಟಿ.ಎಂ.ವಿಜಯ್‍ಭಾಸ್ಕರ್ ಅವರನ್ನು ರಾಜ್ಯಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಕೆ.ರತ್ನಪ್ರಭಾ ಅವರು ಇಂದು ನಿವೃತ್ತಿಯಾಗಲಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ವಿಜಯ್‍ಭಾಸ್ಕರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಕನ್ನಡದವರೇ ಆದ ವಿಜಯ್‍ಭಾಸ್ಕರ್ 1983ರಿಂದ ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಯಾಗಿರುವ ಇವರ ಅವಧಿ 2020ರ ಡಿಸೆಂಬರ್‍ವರೆಗೂ ಇದ್ದು, ಅಲ್ಲಿಯವರೆಗೂ ಮುಖ್ಯ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.

ಈಗಾಗಲೇ 34 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅವರು, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಸಂಪುಟ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ನೇಮಕದ ಅಧಿಕಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನೀಡಲಾಗಿತ್ತು. ಅದರಂತೆ ವಿಜಯ್‍ಭಾಸ್ಕರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.