ಕೆ.ಎನ್.ಪಿ.ವಾರ್ತೆ,ನವದೆಹಲಿ,ಮೇ.07;

ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರಿಗೆ ಸುಪ್ರೀಂಕೋರ್ಟ್ ಆಂತರಿಕ ವಿಚಾರಣಾ ಸಮಿತಿಯು ಕ್ಲೀನ್ ಚಿಟ್ ನೀಡಿದ್ದು, ಆರೋಪ ಆಧಾರ ರಹಿತ ಎಂದು ವರದಿ ನೀಡಿದೆ.

ಸಿಜೆಐ ವಿರುದ್ಧ ಸುಪ್ರೀಂಕೋರ್ಟ್ ಮಾಜಿ ಉದ್ಯೋಗಿಯೊಬ್ಬರು ಮಾಡಿದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ಆಂತರಿಕ ವಿಚಾರಣಾ ಸಮಿತಿ ಮೇ 5ರಂದು ವರದಿ ಸಲ್ಲಿಸಿದ್ದು, ಮಹಿಳೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರದ್ದುಗೊಳಿಸಿದೆ.

ವಜಾಗೊಂಡಿದ್ದ ನ್ಯಾಯಾಂಗ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ಮುಖ್ಯ ನ್ಯಾಯಮೂರ್ತಿಗಳು ಈ ಆರೋಪವನ್ನು ತಿರಸ್ಕರಿಸಿದ್ದರು.

ಹಾಗಿದ್ದರೂ ನ್ಯಾಯಾಂಗದ ಘನತೆಯನ್ನು ಎತ್ತಿ ಹಿಡಿಯುವುದಕ್ಕಾಗಿ ಜಸ್ಟಿಸ್ ಎಸ್‌.ಎ ಬೊಬ್ಡೆ ನೇತೃತ್ವದ ತ್ರಿಸದಸ್ಯ ಆಂತರಿಕ ವಿಚಾರಣಾ ಸಮಿತಿಯ ಮೂಲಕ ಆರೋಪದ ಕುರಿತು ತನಿಖೆ ನಡೆಸಲಾಗಿತ್ತು. ಇದೀಗ ಈ ಸಮಿತಿ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ಅವರನ್ನು ಆರೋಪಮುಕ್ತಗೊಳಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.