ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಸೆ.11;

ಮಹಿಳೆಯರನ್ನು ಸಲಿಂಗಕಾಮಕ್ಕೆ ಬಳಸಿಕೊಳ್ಳುತ್ತಿದ್ದ ಮಹಿಳೆಗೆ ಗೂಸಾ ನೀಡಿರುವ ಘಟನೆ ನಗರದ ಮಂಟೂರ ರಸ್ತೆಯ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ.

ಪತಿಯನ್ನು ಕಳೆದುಕೊಂಡ, ಪತಿಯಿಂದ ದೂರವಾಗಿರುವ ಮಹಿಳೆಯರನ್ನು ಸಲಿಂಗಕಾಮಕ್ಕೆ ಬಳಸಿಕೊಳ್ಳುತ್ತಿದ್ದಳು ಎನ್ನಲಾದ ಮಹಿಳೆಯೊಬ್ಬರನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಗರದ ಮಂಟೂರ ರಸ್ತೆಯ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ.

ಲೀನಾ ಫರ್ನಾಂಡೀಸ್ ಸಾರ್ವಜನಿಕರಿಂದ ಗೂಸಾ ತಿಂದ ಮಹಿಳೆ. ಮಾದಕ ವ್ಯಸನಿಯಾಗಿರುವ ಲೀನಾ, ಮಹಿಳೆಯೊಬ್ಬರನ್ನು ಬಲೆಗೆ ಹಾಕಿಕೊಂಡು ಕಳೆದು ಒಂದು ವಾರದಿಂದ ತನ್ನ ವಶದಲ್ಲಿಟ್ಟುಕೊಂಡಿದ್ದಳು.

ಇತರೆ ಮಹಿಳೆಯರನ್ನೂ ಮಾದಕ ವ್ಯಸನಿ ಜಾಲಕ್ಕೆ ತಳ್ಳುತ್ತಿದ್ದ ಈಕೆ ಈಗಾಗಲೇ ಮೂವರು ಮಹಿಳೆಯರ ಜೀವನ ಹಾಳು ಮಾಡಿದ್ದಾಳೆಂದು ಆರೋಪಿಸಲಾಗಿದೆ. ಈ ಎಲ್ಲ ಘಟನೆಗಳಿಂದ ಬೇಸತ್ತ ಸಾರ್ವಜನಿಕರು ಮಹಿಳೆಯ ಕುರಿತು ಕೇಶ್ವಾಪೂರ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಾರ್ವಜನಿಕರು ಲೀನಾಳನ್ನು ಕರೆತಂದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.