ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.15;

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಗುರುವಾರ ಪತನಗೊಳ್ಳಲಿದ್ದು, ಆ ನಂತರ ಬಿಜೆಪಿ ಸರಕಾರ ರಚನೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ವಿಧಾನಸಭಾ ಕಲಾಪದ ನಂತರ ಬಿಜೆಪಿ ಶಾಸಕರು ತಂಗಿದ್ದ ರೆಸಾರ್ಟ್‌ಗೆ ತೆರಳಿದ ಯಡಿಯೂರಪ್ಪ, ಸುದ್ದಿಗಾರರೊಂದಿಗೆ ಮಾತನಾಡಿದರು. ಗುರುವಾರ ವಿಶ್ವಾಸಮತ ಯಾಚನೆ ಮಾಡುವುದಾಗಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಆದರೆ ಅವರಿಗೆ ಬಹುಮತ ಇಲ್ಲ ಎಂಬುದು ಗುರುವಾರ ಸ್ಪಷ್ಟವಾಗಲಿದ್ದು, ಬಳಿಕ ಮೂರು ನಾಲ್ಕು ದಿನದಲ್ಲಿ ಬಿಜೆಪಿ ಸರಕಾರ ರಚನೆಯಾಗಲಿದೆ. ಅಲ್ಲಿಯವರೆಗೆ ಕಾದು ನೋಡಿ ಎಂದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.