ಕೆ.ಎನ್.ಪಿ.ವಾರ್ತೆ,ಹೇಗ್,ಜು.17;

ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಇಂದು ಹೊರ ಬೀಳುವ ಸಾಧ್ಯತೆ ಇದ್ದು, ವಾದ ಪ್ರತಿವಾದ ಆಲಿಸಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಕುಲಭೂಷಣ್ ಜಾಧವ್ ಗೆ ಗೂಢಚಾರಿ ಹಾಗೂ ಉಗ್ರವಾದ ಆರೋಪದ ಮೇಲೆ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ ಮರಣದಂಡನೆಯನ್ನು ವಿಧಿಸಿತ್ತು. ಇದು ಭಾರತ ಮತ್ತು ಪಾಕಿಸ್ತಾನ ನಡುವೆ ಶೀತಲ ಸಮರಕ್ಕೆ ನಾಂದಿ ಹಾಡಿತ್ತು.

ಇನ್ನು ಪಾಕಿಸ್ತಾನ ತೀರ್ಪು ವಿರುದ್ಧ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಮೊರೆ ಹೋಗಿತ್ತು. ಈ ಪ್ರಕರಣದ ವಿಚಾರಣೆ ಐಸಿಜೆಯ ಹೇಗ್ ಕೇಂದ್ರ ಕಚೇರಿಯಲ್ಲಿ ಕಳೆದ ಫೆಬ್ರವರಿ 18ರಂದು ಆರಂಭಗೊಂಡಿತ್ತು.

ಇನ್ನು ಇಂದು ಎರಡು ಮಹಾ ತೀರ್ಪು ಪ್ರಕಟಗೊಳ್ಳುವ ಸಾಧ್ಯತೆ ಇದ್ದು, ಕರ್ನಾಟಕದ ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಹಾಗೂ ಕುಲಭೂಷಣ್ ಜಾಧವ್ ಪ್ರಕರಣ ಒಂದೇ ದಿನ ತೀರ್ಪು ಬರಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.