ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.15;

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಬಲವಂತದ ಕ್ರಮ ಜರುಗಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ರೋಹಿಂಗ್‍ಟನ್ ನಾರಿಮನ್ ಅವರನ್ನೊಳಗೊಂಡ ಪೀಠ ಇಡಿ ಮೇಲ್ಮನವಿಯನ್ನು ಇಂದು ವಜಾಗೊಳಿಸಿದೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಡಿ.ಕೆ.ಶಿವಕುಮಾರ್ ಅವರನ್ನು ಸೆ.3 ರಂದು ಇಡಿ ಬಂಧಿಸಿತ್ತು.

ಇದರ ನಂತರ ಡಿಕೆಶಿ 48 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು.

ಕಳೆದ ತಿಂಗಳು ಅಂತ್ಯದಲ್ಲಿ ದೆಹಲಿ ಹೈಕೋರ್ಟ್ ಶಿವಕುಮಾರ್ ಗೆ ಜಾಮೀನು ಮಂಜೂರು ಮಾಡಿತ್ತು. ಸದ್ಯ ಸುಪ್ರೀಂ ಕೋರ್ಟ್ ಆದೇಶದಿಂದ ಮಾಜಿ ಸಚಿವ ಶಿವಕುಮಾರ್ ತುಸು ನಿರಾಳರಾಗಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.