ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.03;

ಸತತ ಮಳೆ, ಪ್ರವಾಹದಿಂದ ತತ್ತರಿಸಿರುವ ಜನತೆಗೆ ಇಲ್ಲಿದೆ ಸಿಹಿಸುದ್ದಿ…. ಕರ್ನಾಟಕದಲ್ಲಿ ನವೆಂಬರ್ 03 ರಿಂದ ಮಳೆ ಕಡಿಮೆಯಾಗಲಿದೆ. 

ನವೆಂಬರ್ 03 ರಿಂದ 07 ರವರೆಗೆ ರಾಜ್ಯದಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆ ಇಲ್ಲದಿದ್ದರೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಇರಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಿದೆ.

ಉತ್ತರ ಕನ್ನಡ, ಬೀದರ್ ಸೇರಿದಂತೆ ವಿವಿಧ ಕಡೆ ಶನಿವಾರ ಸಾಧಾರಣ ಮಳೆಯಾಗಿದೆ. ಕಿರವತ್ತಿ, ಔರಾದ್‌ನಲ್ಲಿ 4 ಸೆಂ. ಮೀ., ಕಮಲಾಪುರ, ಚಿಂಚೋಳಿ, ಬೀದರ್‌ನಲ್ಲಿ 1 ಸೆಂ. ಮೀ. ಮಳೆಯಾಗಿದೆ.

ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ದೇಶದಲ್ಲಿ ಮುಂಗಾರು ಋತು ಜಾರಿಯಲ್ಲಿ ಇರುತ್ತದೆ. ಈ ವರ್ಷದ ಮುಂಗಾರಿನಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ 23ರಷ್ಟು ಹೆಚ್ಚು ಮಳೆಯಾಗಿದ್ದರಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಅಕ್ಟೋಬರ್ ತಿಂಗಳು ಬಂದರೂ ಮಳೆ ಕಡಿಮೆಯಾಗಿರಲಿಲ್ಲ.

ಅಕ್ಟೋಬರ್‌ನಲ್ಲಿ ಎರಡು ಚಂಡಮಾರುತದ ಪ್ರಭಾವದಿಂದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿತ್ತು. ಮತ್ತೆ ಪ್ರವಾಹ ಉಂಟಾಗಿತ್ತು. ಮಳೆ ಬಿಟ್ಟರೆ ಸಾಕು ಎಂದು ಜನರು ದೇವರಲ್ಲಿ ಪ್ರಾರ್ಥನೆ ಮಾಡಿದ್ದರು.

ಹವಾಮಾನ ಇಲಾಖೆ ಈಗ ಜನರಿಗೆ ನೆಮ್ಮದಿ ನೀಡುವ ಸುದ್ದಿಯನ್ನು ಕೊಟ್ಟಿದ್ದು, ನವೆಂಬರ್‌ನಲ್ಲಿ ರಾಜ್ಯದಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಹೇಳಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.