ಕೆ.ಎನ್.ಪಿ.ವಾರ್ತೆ,ಹಾವೇರಿ,ಅ.24;

ಕಳೆದ ಎರಡು, ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ನದಿಗೆ ಎತ್ತುಗಳ ಮೈ ತೊಳೆಯಲು ಇಳಿದಿದ್ದ ಅಜ್ಜ, ಮೊಮ್ಮಗ ನೀರಿನ ರಭಸಕ್ಕೆ ಸಿಲುಕಿ ಮೃತ ಪಟ್ಟಿರುವ ಘಟನೆ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಪ್ರವೀಣ ಬಡಿಗೇರ(18), ಪರಮೇಶಪ್ಪ ಬಡಿಗೇರ(55) ಮೃತ ದುರ್ದೈವಿಗಳು. ಎತ್ತುಗಳನ್ನು ತೊಳೆದು ತಾನು ಸ್ನಾನಕ್ಕೆ ಮುಂದಾದ ಪ್ರವೀಣ ನದಿ ಹರಿವು ಜಾಸ್ತಿಯಾದ ಹಿನ್ನಲೆಯಲ್ಲಿ ಆತ ಕೊಚ್ಚಿಹೋದ. ಇದನ್ನು ನೋಡಿದ ಆತನ ಅಜ್ಜ ಮೊಮ್ಮಗನನ್ನು ರಕ್ಷಿಸಲು ನದಿಯಲ್ಲಿ ಇಳಿದ ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಹೋದರು ಎನ್ನುತ್ತಾರೆ ಪ್ರತ್ಯಕ್ಷದರ್ಶಿಗಳು.

 

ಏಳೆಂಟು ಜನ ಇದ್ದರು ಸಹ ಅವರಿಬ್ಬರನ್ನು ರಕ್ಷಿಸಲಾಗಲಿಲ್ಲ. ಕಾರಣ ನದಿಯ ನೀರಿನ ಹರಿವು ಹಾಗೂ ರಭಸವು ಜಾಸ್ತಿ ಇರುವುದರಿಂದ ಭಯ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಶೋಧ ಕಾರ್ಯ:

ಘಟನಾ ಸ್ಥಳಕ್ಕೆಅಗ್ನಿಶಾಮಕ ದಳದ ಠಾಣಾಧಿಕಾರಿ ಅಮೃತ ಟಿ ನೇತೃತ್ವದಲ್ಲಿ ತಮ್ಮ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಯಿತು.
ಗುತ್ತಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಗುರುಶಾಂತಸ್ವಾಮಿ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.