ಕೆ.ಎನ್.ಪಿ.ವಾರ್ತೆ,ಕನಕಗಿರಿ,ನ.08;

ಮಾನವ ಹಕ್ಕುಗಳ ಒಕ್ಕೂಟ ದ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಸೈಯದ್ ಮುರ್ತುಜಾ ರವರ ಆದೇಶದ ಮೇರೆಗೆ ಕೊಪ್ಪಳ ಜಿಲ್ಲಾಧ್ಯಕ್ಷರಾದ ಮಂಜುನಾಥ ತೋಟಗೇರ್, ಜಿಲ್ಲಾ ಕಾರ್ಯದರ್ಶಿಗಳಾದ ಗಾಳೇಶ ಜಿ ಡಿ ಕೆ ರವರು ಶಿವಯ್ಯ ಎಸ್ ಸ್ವಾಮಿ ನವಲಿ ಇವರನ್ನು ಕನಕಗಿರಿ ತಾಲೂಕ ಕಾರ್ಮಿಕ ವಿಭಾಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು.

ಈ ವೇಳೆ ಮಾತನಾಡಿದ ಮಾನವ ಹಕ್ಕುಗಳ ಒಕ್ಕೂಟ ಕೊಪ್ಪಳ ಜಿಲ್ಲಾಧ್ಯಕ್ಷರು, ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ.

ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ. ವಾಕ್ಯಾಂಗದ ಉಪ ನಿಯಮಗಳು ಮಾತನಾಡುವ (ಹಕ್ಕು) ಸ್ವಾತಂತ್ರ್ಯತೆಯನ್ನು ಒದಗಿಸಿದೆ.

ಕಾರ್ಯಾಂಗ ಮತ್ತು ನ್ಯಾಯಾಂಗ ಬೇರೆ ಬೇರೆಯಾಗಿದ್ದು, ದೇಶದ ಒಳಗೆ ಮತ್ತು ಹೊರಗೆ ಎಲ್ಲಾ ರೀತಿಯ ಚಲನೆಯ ಸ್ವಾತಂತ್ರ್ಯವನ್ನೂ ನೀಡಲಾಗಿದೆ.

ಈ ನಿಟ್ಟಿನಲ್ಲಿ ಸಾಮಾಜಿಕ ಸೇವೆ, ನಿರಂತರ ಹೋರಾಟ ಮತ್ತು ಮಾನವ ಹಕ್ಕುಗಳ ಸಂರಕ್ಷಣೆಗಾಗಿ ಪ್ರಾಮಾಣಿಕವಾಗಿ ಹೋರಾಟಮಾಡುತ್ತಿರುವ 

ಯುವ ಮಿತ್ರ ಶಿವಯ್ಯ ಎಸ್ ನವಲಿ ಇವರನ್ನು ಕನಕಗಿರಿ ತಾಲೂಕ ಅಧ್ಯಕ್ಷರನ್ನಾಗಿ ನೇಮಿಸಿದ್ದು, ನಮಗೆ ಹರುಷ ತಂದಿದೆ.

ಜಿಲ್ಲೆಯ ಹಿಂದುಳಿದ ತಾಲೂಕ ಕನಕಗಿರಿ ಭಾಗದ ಜನರ ಹಿತ ಕಾಪಾಡಲು ಹಾಗೆಯೇ ಕೆಲ ಕ್ಷೇತ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ಕಾರ್ಮಿಕ ಹಕ್ಕುಗಳ ಉಲ್ಲಂಘನೆ ಆಗುತ್ತಿದ್ದು ಈ ಭಾಗದಲ್ಲಿ ಜನರಿಗೆ ಮಾನವ ಹಕ್ಕುಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಪ್ರಯುಕ್ತ ಕೆಲ ಪರೋಕ್ಷ ಮತ್ತು ಪ್ರತ್ಯಕ್ಷ ಅಪರಾಧಗಳು ಕೆಲ ರಾಜಕೀಯ ಕೈ ವಾಡದಿಂದ ಬೆಳಕಿಗೆ ಬರದೇ ಎಷ್ಟೋ ಅಮಾಯಕರ ಹಾಗೂ ಕಾರ್ಮಿಕರ ಕಷ್ಟಗಳಿಗೆ ಹಾಗೂ ದುರ್ವ್ಯವಸ್ಥೆಗಳಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ.

ಅವರು ಸ್ಪೂರ್ತಿ ಆಗಲಿ ಎಂದು ಹಾರೈಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಗದಗ ಜಿಲ್ಲಾ ಉಪಾಧ್ಯಕ್ಷರು, ಕೊಪ್ಪಳ ಜಿಲ್ಲಾ ಹಾಗೂ ತಾಲೂಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.