ಕೆ.ಎನ್.ಪಿ.ವಾರ್ತೆ,ಮಂಡ್ಯ,ನ.24;

ನಾಲೆಗೆ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ನಡೆದಿದೆ.

ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಕನಗನ ಮರಡಿಯ ವಿಸಿ ನಾಲೆಗೆ ಉರುಳಿಬಿದ್ದ ಪರಿಣಾಮ 25 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ತಡೆಗೋಡೆ ಇಲ್ಲದ ಕಾರಣ ಬಸ್ ನಾಲೆಗೆ ಉರುಳಿ ಬಿದ್ದಿದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯ ನಡೆಸಿ 20ಕ್ಕೂ ಹೆಚ್ಚು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ದುರಂತದಲ್ಲಿ ಓರ್ವ ಶಾಲಾ ಬಾಲಕ ಮಾತ್ರ ಬದುಕುಳಿದಿದ್ದಾನೆ.

ಕೆಎ19 ಎಫ್ ಎ 5676 ನೋಂದಣಿ ಸಂಖ್ಯೆಯ ಖಾಸಗಿ ಬಸ್‌, ಚಾಲಕನ ನಿಯಂತ್ರಣ ತಪ್ಪಿ, 12 ಅಡಿ ಆಳದ ವಿ.ಸಿ ನಾಲೆಗೆ ಬಿದ್ದಿದೆ. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಮಧ್ಯಾಹ್ನದ ವೇಳೆ ಘಟನೆ ನಡೆದಿದ್ದು, ಕನಗನ ಮರಡಿ ಗ್ರಾಮದ ಶಾಲೆಯಿಂದ ಮಕ್ಕಳು ಇದೇ ಬಸ್‌ನಲ್ಲಿ ಅರ್ಧ ದಿನದ ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದರು.

ಘಟನೆ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದ್ದು, ಘಟನಾ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮುಂದೂಡುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.