ಕೆ.ಎನ್.ಪಿ.ವಾರ್ತೆ,ವಿಜಯಪುರ,ಏ.23;

ಇಲ್ಲಿನ ಇಂಡಿ ತಾಲ್ಲೂಕಿನ ಅಹಿರಸಂಗ ಗ್ರಾಮದಲ್ಲಿ ಮತದಾನ ಮಾಡಿ ಹೊರ ಬಂದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.

ವಿಜಯಪುರ ಜಿಲ್ಲೆಯ ಅಹಿರಸಂಗ ಗ್ರಾಮದ ಮತಗಟ್ಟೆ ಸಂಖ್ಯೆ 32ರಲ್ಲಿ ಮಹಾದೇವಿ ಮಹಾದೇವಪ್ಪ ಸಿಂದಖೇಡ ಎಂಬ ಮಹಿಳೆ ಮತದಾನ ಮಾಡಿ ಹೊರ ಬಂದು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ತಲೆ ಸುತ್ತು ಬರುತ್ತಿದೆ ಎಂದು ಹೇಳಿದ 55 ವರ್ಷ ವಯಸ್ಸಿನ ಈ ಮಹಿಳೆ ಏಕಾಏಕಿ ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ತೀವ್ರ ಬಿಸಿಲಿನಿಂದ ಬಳಲಿದ್ದ ಮಹಿಳೆ, ಮತದಾನ ಮಾಡಲು ಸುಮಾರು ಹೊತ್ತು ಸರತಿ ಸಾಲಿನಲ್ಲಿ ನಿಂತಿದ್ದರು. ಇದರಿಂದ ಆಯಾಸಗೊಂಡಿದ್ದ ಆಕೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.