ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.29;

ನಟ ಅರ್ಜುನ್ ಸರ್ಜಾ ಮೇಲೆ ನಟಿ ಶೃತಿ ಹರಿಹರನ್ ಮಾಡಿದ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾಗೆ ಡಿ.11ರ ತನಕ ಕೊಂಚ ರಲೀಫ್ ದೊರೆತಿದೆ.

ಲೈಂಗಿಕ ಕಿರುಕುಳ ಆರೋಪದ ಮೇಲೆ ನಟಿ ಶ್ರುತಿ ಹರಿಹರನ್‌ ದೂರಿನ ಪ್ರಕರಣದಲ್ಲಿ ಹಿರಿಯ ನಟ ಅರ್ಜುನ್‌ ಸರ್ಜಾ ಅವರನ್ನು ಬಂಧಿಸದಂತೆ, ತನಿಖೆ ಮುಂದುವರಿಸಲು ನೀಡಿದ್ದ ಮಧ್ಯಾಂತರ ಆದೇಶವನ್ನು ಹೈಕೋರ್ಟ್‌ ಡಿ.11ರವರೆಗೆ ವಿಸ್ತರಣೆ ಮಾಡಿದೆ.

ಶೃತಿ ಹರಿಹರನ್ ಅವರು ವಿಸ್ಮಯ ಚಿತ್ರೀಕರಣದ ವೇಳೆ ತಮಗೆ ಆದ ಲೈಂಗಿಕ ಕಿರುಕುಳದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ದೂರು ನೀಡಿದ್ದರು. ಈ ದೂರಿನ ಅನ್ವಯ ಪೋಲಿಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ನಂತರ ಅರ್ಜುನ್ ಸರ್ಜಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸರ್ಜಾ ಸಲ್ಲಿಸಿರುವ ಅರ್ಜಿ ನಿಗದಿಯಂತೆ ಬುಧವಾರ ನ್ಯಾ.ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತು.

ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಅರ್ಜುನ್ ಸರ್ಜಾ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಹೈಕೋರ್ಟ್‌ ಆದೇಶಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.