ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.02;

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಾಗ್ಗೆ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಶನಿವಾರ ರಾತ್ರಿಯಿಂದ ಆರಂಭವಾಗಿರುವ ಮಳೆ ಸೋಮವಾರವೂ ಮುಂದುವರೆದಿದ್ದು, ದಟ್ಟವಾದ ಮೋಡ ಕವಿದ ವಾತಾವರಣವಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಬೆಳಗ್ಗಿನಿಂದಲೇ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.

ಕೆಲ ನಿಮಿಷಗಳವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆ ಸುರಿದರೆ, ಮತ್ತೆ ಕೆಲಕಾಲ ತುಂತುರು ಮಳೆಯಾಗುತ್ತಿದೆ. ಭಾನುವಾರ ಮಳೆ ನಿಲ್ಲುವ ಖಚಿತತೆ ಇಲ್ಲದಿದ್ದರಿಂದ ಅನೇಕರು ಮನೆಯಲ್ಲೇ ದಿನ ಕಳೆಯುವಂತಾಯಿತು. ಮಳೆ ನಿಂತಿದೆ ಎಂದುಕೊಂಡು ಶಾಪಿಂಗ್‌ ಮಾಲ್‌, ಥಿಯೇಟರ್‌ಗಳಿಗೆ ತೆರಳಿದವರು ಬಿಟ್ಟು ಬಿಟ್ಟು ಬಂದ ಮಳೆಯಲ್ಲಿ ನೆನೆದು ಹೈರಾಣಾದರು.

ಆರೋಗ್ಯದ ಮೇಲೆ ದುಷ್ಪರಿಣಾಮ, ಎಚ್ಚರ ವಹಿಸಿ :

ನಿರಂತರವಾಗಿ ಸುರಿದ ಮಳೆಯು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆ ಇರುವುದರಿಂದ ಜನರು ಆರೋಗ್ಯದ ಕಡೆ ಗಮನಹರಿಸಬೇಕಿದೆ. ದಿಢೀರನೆ ಮಳೆಯಾಗಿದ್ದರಿಂದ ಕೆಮ್ಮು, ನೆಗಡಿ, ತಲೆನೋವು ಮೊದಲಾದ ರೋಗಗಳು ಹರಡಲು ಆರಂಭವಾಗಿದೆ.

ನಿಂತ ನೀರಿನಿಂದ ಸೊಳ್ಳೆಗಳ ಉತ್ಪತ್ತಿಗೂ ಅನುಕೂಲವಾದಂತಾಗಿದೆ. ಬಿಸಿಲು ಮರೆಯಾಗಿ ಮಳೆಯಾಗುತ್ತಿರುವುದರಿಂದ ಸಾಂಕ್ರಮಿಕ ರೋಗಗಳು ಸುಲಭವಾಗಿ ಹರಡಲು ಸಾಧ್ಯವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.