ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.15;
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮೊದಲ ಗೆಲುವು ಸಾಧಿಸಿದ್ದು, ಮೂಡಬಿದಿರೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ರಾಜ್ಯದ ಮೊದಲ ಫಲಿತಾಂಶ ಮೂಡಬಿದಿರೆಯಿಂದ ಪ್ರಕಟವಾಗಿದ್ದು, ಬಿಜೆಪಿಯ ಉಮಾನಾಥ ಕೋಟ್ಯಾನ್ ಅವರು ಎದುರಾಳಿ ಕಾಂಗ್ರೆಸ್‌ನ ಅಭಯಚಂದ್ರ ಜೈನ್ ವಿರುದ್ಧ 22,000ಕ್ಕೂ ಹೆಚ್ಚು ಮತಗಳಿಂದ ಜಯ ಸಾಧಿಸಿದ್ದಾರೆ.
ಆರಂಭಿಕ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡು ಬಂದಿದೆ. ಜೆಡಿಎಸ್ 3ನೇ ಸ್ಥಾನಕ್ಕೆ ಹೋರಾಡುತ್ತಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಸದ್ಯ 191 ಕ್ಷೇತ್ರಗಳ ಮುನ್ನಡೆ ಟ್ರೆಂಡ್ ಲಭ್ಯವಿದ್ದು 69 ಕಾಂಗ್ರೆಸ್, 110 ಬಿಜೆಪಿ, ಜೆಡಿಎಸ್ 41 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.