ಕೆ.ಎನ್.ಪಿ.ವಾರ್ತೆ, ಬೆಂಗಳೂರು,ಮೇ.30;
ಮೂರು ಪಕ್ಷಗಳ ಪ್ರತಿಷ್ಠೆಯ ಕಣವಾಗಿದ್ದ ರಾಜರಾಜೇಶ್ವರಿ ನಗರದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಕಾಂಗ್ರೆಸ್ ನ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರಿಗಿಂತ 40 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ನ ಮುನಿರಾಜು ರಾಜರಾಜೇಶ್ವರಿ ನಗರದಲ್ಲಿ ಶಾಸಕರಾಗಿ ಮರು ಆಯ್ಕೆಯಾಗಿದ್ದಾರೆ.
18 ಸುತ್ತುಗಳ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮೊದಲ ಸುತ್ತಿನಿಂದಲೇ ಕಾಂಗ್ರೆಸ್ ನ ಅಭ್ಯರ್ಥಿ ಮುನಿರತ್ನ ಮುನ್ನಡೆ ಕಾಯ್ದುಕೊಂಡಿದ್ದರು. ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿರುವುದು ಕಂಡುಬಂತು.
ಬಿಜೆಪಿ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ನಿಧನರಾದ ಕಾರಣಕ್ಕೆ ಜಯನಗರ ಹಾಗೂ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮೇ.12ರಂದು ನಡೆಯಬೇಕಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ಮೇ.28ಕ್ಕೆ ಮುಂದೂಡಿತ್ತು. ಇದೇ 28ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಶೇ 54.20 ರಷ್ಟು ಮತದಾನ ನಡೆದಿತ್ತು. ಕ್ಷೇತ್ರದಲ್ಲಿ ಒಟ್ಟು 4,71,900 ಮತದಾರರಿದ್ದು, ಮತದಾನಕ್ಕಾಗಿ 421 ಮತಗಟ್ಟೆ ಸ್ಥಾಪನೆ ಮಾಡಲಾಗಿತ್ತು.
ಕಾಂಗ್ರೆಸ್- ಮುನಿರತ್ನ- 1,03,195
ಬಿಜೆಪಿ- ತುಳಸಿ ಮುನಿರಾಜುಗೌಡ – 69,769
ಜೆಡಿಎಸ್-ಜಿ.ಎಚ್. ರಾಮಚಂದ್ರ- 54,289
ಪಕ್ಷೇತರ– ಹುಚ್ಚ ವೆಂಕಟ್- 604
ನೋಟಾ- 2,061
223 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವಾರು ಸ್ಥಾನಗಳು:
ಬಿಜೆಪಿ– 104
ಕಾಂಗ್ರೆಸ್– 79 (ಆರ್.ಆರ್.ನಗರ ಸೇರಿ)
ಜೆಡಿಎಸ್– 37
ಇತರೆ– 3
ನೀವು ಕೂಡ ಬರೆಯಬಹುದು :
9513326661
ಆತ್ಮೀಯರೇ ಕೆ.ಎನ್.ಪಿ.ಯಲ್ಲಿ ನೀವು ಕೂಡ ಬರೆಯಬಹುದಾಗಿದೆ. ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆಯಿರಿ, ಕೆ.ಎನ್.ಪಿ.ಗೆ ಕಳುಹಿಸಿರಿ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.