ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.21;

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಕ್ರೀದ್ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಹಬ್ಬವು ತ್ಯಾಗ, ಬಲಿದಾನ, ಸಹಬಾಳ್ವೆಯ ಪ್ರತೀಕವಾಗಿದ್ದು, ನಮ್ಮ ಬದುಕಿನಲ್ಲಿಯೂ ಈ ಗುಣಗಳನ್ನು ಅಳವಡಿಸಿಕೊಳ್ಳೋಣ. ಪ್ರಕೃತಿಯ ಮುನಿಸಿನಿಂದ ಸಂಕಷ್ಟಕ್ಕೆ ಈಡಾದ ಜನತೆಯ ನೆರವಿಗೆ ಧಾವಿಸಲು ಈ ಹಬ್ಬ ಸ್ಪೂರ್ತಿಯಾಗಲಿ ಎಂದು ಅವರು ಆಶಿಸಿದ್ದಾರೆ.

ದೇಶದ ಹಲವೆಡೆ ಚಂದ್ರದರ್ಶನವಾದ ಹಿನ್ನಲೆಯಲ್ಲಿ ಕರ್ನಾಟಕ ಭಾಗದಲ್ಲಿ ಆಗಸ್ಟ್ 22ರಂದೇ ಬಕ್ರೀದ್ ಆಚರಣೆ ನಡೆಸಲಾಗುವುದು. ಚಂದ್ರದರ್ಶನ ಸಮಿತಿ ಅಭಿಪ್ರಾಯದಂತೆ ರಾಜ್ಯ ಸರ್ಕಾರ ಬಕ್ರೀದ್ ರಜೆಯನ್ನು ಈ ಹಿಂದೆ ಪ್ರಕಟಿಸಿದಂತೆ ಆಗಸ್ಟ್ 22ರಂದೇ ರಜೆ ನೀಡಲಾಗಿದೆ ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.