ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.23;

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.

ವಿ ಸೋಮಣ್ಣ, ಮಾನ್ಯ ಸಚಿವರು, ಕರ್ನಾಟಕ ಸರ್ಕಾರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಡ ಹಬ್ಬ ದಸರಾ ಸಮೀಪಿಸುತ್ತಿದ್ದು, ದಸರಾ ಸಿದ್ಧತೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ತುರ್ತು ಅಗತ್ಯ ಇರುವುದರಿಂದ ರಾಜ್ಯ ಸರ್ಕಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾತ್ರವೇ ನೇಮಕ ಮಾಡಿದೆ ಎನ್ನಲಾಗಿದೆ.

ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೆ ಶಂಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನಿತೇಶ್ ಪಾಟೀಲ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.