ಕೆ.ಎನ್.ಪಿ.ವಾರ್ತೆ,ಮೈಸೂರು,ಆ.23;

ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ವರ್ಗಾವಣೆ ಆದೇಶವನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಬಾರಿಯೂ ನಾಡಹಬ್ಬವು ಅವರ ಸಾರಥ್ಯದಲ್ಲಿ ಮುಂದುವರೆಯಲಿದೆ.

ನಿನ್ನೆ ಮಧ್ಯಾಹ್ನ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರನ್ನು ವರ್ಗಾವಣೆಗೊಳಿಸಿ ಆದೇಶಹೊರಡಿಸಿದ್ದರು. ಇದಕ್ಕೆ ಮೈಸೂರು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಬೇಸರ ವ್ಯಕ್ತಪಡಿಸಿದ್ದರು. ಸರ್ಕಾರ ಧೋರಣೆಯನ್ನು ಸಹ ಖಂಡಿಸಿದ್ದರು.

ದಸರಾ ಮಹೋತ್ಸವ ಹತ್ತಿರವಿರುವಾಗಲೇ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ವರ್ಗಾವಣೆ ಮಾಡಿರುವ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಆರ್.ಅಶೋಕ್, ಈಗಿರುವ ಜಿಲ್ಲಾಧಿಕಾರಿಗಳೇ ದಸರಾ ಕೆಲಸ ಪ್ರಾರಂಭ ಮಾಡಿದ್ದಾರೆ. ಅವರನ್ನು ಮೈಸೂರಿನಲ್ಲೇ ಉಳಿಸಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಸಹ ತಿಳಿಸಿದ್ದರು. ಸಚಿವ ಅಶೋಕ್ ರವರ ಒತ್ತಾಯದ ಹಿನ್ನೆಲೆ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.