ಕೆ.ಎನ್.ಪಿ.ವಾರ್ತೆ,ನವದೆಹಲಿ,ಏ.11;

ಬಜೆಟ್ ಅಧಿವೇಶನಕ್ಕೆ ಸಂಪೂರ್ಣವಾಗಿ ಅಡ್ಡಿಪಡಿಸಿ, ಅಧಿವೇಶನ ನಡೆಯದಂತೆ ಮಾಡಿದ ವಿರೋಧ ಪಕ್ಷಗಳ ಕ್ರಮವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ನಾಳೆ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

ಸತ್ಯಾಗ್ರಹದಲ್ಲಿ ಬಿಜೆಪಿ ಸಂಸದರು ಮತ್ತು ಬಿಜೆಪಿಯ ಹಲವು ಮುಖಂಡರು ಭಾಗವಹಿಸಲಿದ್ದಾರೆ. ಕರ್ನಾಟಕದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹುಬ್ಬಳ್ಳಿಯಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ಧರಣಿ ಕೂರಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಏ.9 ರಂದು ಕೇಂದ್ರ ಸರ್ಕಾರ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂದು ಆರೋಪಿಸಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದರು.