ಕೆ.ಎನ್.ಪಿ.ವಾರ್ತೆ,ಮಡಿಕೇರಿ,ಜೂ.05;

ಕೊಡಗು ಜಿಲ್ಲೆ ಕುಶಾಲನಗರ ಬಳಿಯ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮೃತರನ್ನು ಅಕಾಶ್, ಗಗನ್ ಮತ್ತು ಶಶಾಂಕ್ ಎಂದು ಗುರುತಿಸಲಾಗಿದ್ದು, ಮೃತರು ಮಡಿಕೇರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇವರೆಲ್ಲ ರಮ್ಜಾನ್‌ ಹಬ್ಬದ ರಜೆ ಹಿನ್ನೆಲೆಯಲ್ಲಿ ಕುಶಾಲನಗರದ ಸ್ನೇಹಿತನ ಮನೆಗೆ ಬಂದಿದ್ದರು. ಊಟದ ನಂತರ ಒಂಭತ್ತು ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ತೆರಳಿದೆ.

ಆಕಾಶ್‌ ಮೊದಲು ನದಿಗೆ ಈಜಲು ಇಳಿದಿದ್ದು, ಆತ ಮುಳುಗುತ್ತಿರುವುದನ್ನು ಕಂಡ ಇತರ ಇಬ್ಬರು ಸ್ನೇಹಿತರು ನದಿಗೆ ಹಾರಿದ್ದಾರೆ. ಆದರೆ, ಮೂವರೂ ನೀರಿನಿಂದ ಹೊರಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವರ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಕುಶಾಲನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.