ಕೆ.ಎನ್.ಪಿ.ವಾರ್ತೆ,ಹಾಸನ,ಮೇ.15;

ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಅವರ ಮೊಮ್ಮಗ, ಹಾಸನದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಚುನಾವಣೆ ಫಲಿತಾಂಶ ಹೊರಬರುವ ಮುನ್ನವೇ ಸಂಕಷ್ಟ ಎದುರಾಗಿದೆ.

ನಾಮಪತ್ರ ಸಲ್ಲಿಕೆ ವೇಳೆ ಅಪೂರ್ಣ ಆಸ್ತಿ ವಿವರ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಗೆ ಇದೀಗ ಸಂಕಷ್ಟ ಎದುರಾಗಿದೆ. ತಾವು 7.39 ಕೋಟಿ ರೂಪಾಯಿ ಆಸ್ತಿಯ ಒಡೆಯ ಎಂದು ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್ ಸಲ್ಲಿಸಿದ್ದರು. ಅಲ್ಲದೆ ತಾವು 3.72 ಕೋಟಿ ರೂ ಸಾಲ ಹೊಂದಿರುವುದಾಗಿಯೂ ಹೇಳಿಕೊಂಡಿದ್ದರು. ಆದರೆ, ಅವರು ಸಲ್ಲಿಸಿರುವ ಆಸ್ತಿ ವಿವರಗಳನ್ನು ಅನೇಕ ಸಂಗತಿಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ. ಅವರ ಆಸ್ತಿ ವಿವರ ಅಪೂರ್ಣವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಮತ್ತು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ಇದೀಗ ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ. ಇದು ಪ್ರಜ್ವಲ್ ಗೆ ಕಂಟಕವಾಗಿ ಪರಿಣಮಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.