ಕೆ.ಎನ್.ಪಿ.ವಾರ್ತೆ,ವಿಜಯಪುರ,ಜೂ.08;

ವಿಜಯಪುರ ಜಿಲ್ಲೆಯ ಗೋಳಸಂಗಿ ಗ್ರಾಮದ ದೇವಾಲಯದಲ್ಲಿರುವ ನಂದಿ ವಿಗ್ರಹಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನವೆಸಗಿದ ಘಟನೆ ನಡೆದಿದ್ದು, ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಶನಿವಾರ ಬೆಳಗಿನ ಜಾವ ಎಂದಿನಂತೆ ದೇವಾಲಯದ ಅರ್ಚಕರು ಪೂಜೆಗಾಗಿ ದೇವಾಲಯಕ್ಕೆ ಆಗಮಿಸಿದ್ದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಬಳಿಕ ದೇವಾಲಯದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ್ದಾರೆ.

ಘಟನೆ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ. ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಡಿವೈಎಸ್ಪಿ, ಸಿಪಿಐ ಸೇರಿದಂತೆ ಪೊಲೀಸರ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿದೆ. 3 ವರ್ಷಗಳ ಹಿಂದೆ ಇದೇ ದೇವಸ್ಥಾನದ ಬಳಿ ಸಾರ್ವಜನಿಕ ಗಣೇಶ ಮೂರ್ತಿ ಭಗ್ನಗೊಳಿಸಿದ ಘಟನೆ ನಡೆದಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.