ಕೆ.ಎನ್.ಪಿ.ವಾರ್ತೆ,ದೇವನಹಳ್ಳಿ,ಆ.24;

ನಂದಿಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ನಡೆದಿದೆ.

ಆವಲಹಳ್ಳಿಯಿಂದ ನಂದಿಬೆಟ್ಟಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಹಂದ್ರಹಳ್ಳಿ ಸಮೀಪ ಈ ದುರ್ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ನಕ್ಕಲಪಲ್ಲಿ ಗ್ರಾಮದ ರಮೇಶ್ (30), ಮಂಜುನಾಥ್ (26), ಅಶೋಕ್ ರೆಡ್ಡಿ (26) ಮತ್ತು ಗೌರೀಶ್ (23) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಉಳಿದ ಐವರನ್ನು ಬೆಂಗಳೂರು ಮತ್ತು ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂಬತ್ತು ಮಂದಿ ಗೆಳೆಯರು ಶನಿವಾರ ಬೆಳಿಗ್ಗೆ ಸೂರ್ಯೋದಯ ವೀಕ್ಷಿಸಲು ನಸುಕಿನಲ್ಲಿ ಹೊರಟಿದ್ದರು. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.