ಕೆ.ಎನ್.ಪಿ.ವಾರ್ತೆ,ಶ್ರೀನಗರ,ಆ.30;

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಶ್ರೀನಗರದಲ್ಲಿ 65 ವರ್ಷದ ವೃದ್ಧನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಉಗ್ರರ ಗುಂಡೇಟಿಗೆ ಗುರಿಯಾದ ವೃದ್ಧ ವ್ಯಕ್ತಿಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಬದುಕಿ ಉಳಿಯಲಿಲ್ಲ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಶ್ರೀನಗರದ ಹೊರಭಾಗದಲ್ಲಿರುವ ಪರಿಂಪೋರದಲ್ಲಿ ವೃದ್ಧ ವ್ಯಕ್ತಿಯೊಬ್ಬರು ಅಂಗಡಿಯನ್ನು ತೆರೆದಿದ್ದರು, ಇದೇ ಕಾರಣಕ್ಕಾಗಿ ಉಗ್ರರು ಆತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಇದಕ್ಕೂ ಮುನ್ನ ಅನಂತ್ ನಾಗ್ ಜಿಲ್ಲೆಯಲ್ಲಿ ಟ್ರಕ್ ಡ್ರೈವರ್ ನ್ನು ಗುರಿಯಾಗಿರಿಸಿಕೊಂಡು ಕಲ್ಲು ಹೊಡೆದು ಹತ್ಯೆ ಮಾಡಲಾಗಿತ್ತು. ಈಗ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕಾಶ್ಮೀರಕ್ಕೆ ಪರಿಸ್ಥಿತಿ ಪರಿಶೀಲನೆಗೆ ತೆರಳುತ್ತಿರುವುದಕ್ಕೂ ಮುನ್ನ ಓರ್ವ ನಾಗರಿಕನನ್ನು ಹತ್ಯೆ ಮಾಡಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.