ಕೆ.ಎನ್.ಪಿ.ವಾರ್ತೆ,ಹಾವೇರಿ,ಅ.26;

ತಾಲೂಕಿನ ನೆಗಳೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವೆಂಕಟೇಶ್ವರ ದೇವಸ್ಥಾನ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ಅ.30 ರಂದು ಬೆಳಗ್ಗೆ 10.30ಕ್ಕೆ ಜರುಗುವುದು.

ಅ.27 ರಂದು ಸಂಜೆ 4ರಿಂದ ನೂತನ ವೆಂಕಟೇಶ್ವರ ಮೂರ್ತಿ ಮೆರವಣಿಗೆಯು ಗ್ರಾಮದ ಸಂಸ್ಥಾನ ಹಿರೇಮಠದಿಂದ ಸಕಲ ಜಾನಪದ ಕಲಾ ವಾದ್ಯ ಮೇಳಗಳೊಂದಿಗೆ ಪ್ರಾರಂಭಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವೆಂಕಟೇಶ್ವರ ದೇವಸ್ಥಾನ ತಲುಪುವುದು. ಮೂರು ದಿನಗಳ ಕಾಲ ಮೂರ್ತಿಗೆ ಕ್ರಮವಾಗಿ ಜಲಾಧಿವಾಸ ಧಾನ್ಯಾಧಿವಾಸ ಪುಷ್ಷಾಧಿವಾಸ ಶಯನಾಧಿವಾಸ ನೆರವೇರುವುದು.

ಅ.30 ರಂದು ಬ್ರಾಹ್ಮಿ ಮುಹೂರ್ತದಲ್ಲಿ ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಯವರ ಸಾನ್ನಿಧ್ಯದಲ್ಲಿ ಹಾಗೂ ಹಿರೇಮಠದ ಗುರುಕುಲ ವೈಧಿಕತ್ವದಲ್ಲಿ ಹೋಮ ಹವನ ಪೂಜಾ ಕೈಕಂರ್ಯಗಳು ಜರುಗಿ ಶ್ರೀಗಳ ಅಮೃತ ಹಸ್ತದಿಂದ ಮೂರ್ತಿ ಪ್ರತಿಷ್ಠಾಪನೆ ಗೊಳ್ಳುವುದು.

ಬೆಳಗ್ಗೆ 10.30ಕ್ಕೆ ಧರ್ಮ ಸಮಾರಂಭ ಜರುಗುವುದು. ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಚಿತ್ರದುರ್ಗ ಮಾದರ ಚನ್ನಯ್ಯ ಗುರು ಪೀಠದ ಶಿವಶರಣ ಚನ್ನಯ್ಯ ಸ್ವಾಮೀಜಿ ನೇತೃತ್ವ ವಹಿಸುವರು. ಅತಿಥಿಗಳಾಗಿ ನಾಡಿನ ರಾಜಕೀಯ ದುರೀಣರು, ಸ್ಥಳೀಯ ಮುಖಂಡರು, ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಳ್ಳುವರೆಂದು ದೇವಸ್ಥಾನ ಸೇವಾಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಗುರುಶಾಂತಸ್ವಾಮಿ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.