ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಏ.27;

ಒಳಚರಂಡಿ ಸ್ವಚ್ಛಗೊಳಿಸಲು ಗುಂಡಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಕಾರ್ಮಿಕರು ಕೆ.ಜಿ.ಹಳ್ಳಿಯ ಟ್ಯಾನರಿ ರಸ್ತೆ ಹಾಗೂ ಮೋದಿ ರಸ್ತೆಯ ನಿವಾಸಿಗಳಾದ ಚೋಟು (40) ಹಾಗೂ ಅಬ್ದುಲ್ ಗಫೂರ್ (45) ಎಂದು ಗುರುತಿಸಲಾಗಿದೆ.

ಟ್ಯಾನರಿ ರಸ್ತೆಯ ಬಿಸ್ಮಿಲ್ಲಾ ಟೀ ಪಾಯಿಂಟ್ ಬಳಿ ಇರುವ ಒಳಚರಂಡಿ, ಕಸಕಡ್ಡಿಗಳಿಂದ ಕಟ್ಟಿಕೊಂಡಿತ್ತು. ಇದರಿಂದ ರಸ್ತೆಗೆ ನೀರು ಹರಿದಿದ್ದರಿಂದ ಸ್ಥಳೀಯ ಟೀ ಅಂಗಡಿ ಮಾಲೀಕ ಕಾರ್ಮಿಕರನ್ನು ಬರುವಂತೆ ಹೇಳಿ ಕಳುಹಿಸಿದ್ದರು.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಒಳಚರಂಡಿಯನ್ನು ಸ್ವಚ್ಛಗೊಳಿಸಲು ಚೋಟು ಮತ್ತು ಗಫೂರ್ ಆಗಮಿಸಿದ್ದಾರೆ. ಮೊದಲು ಚೋಟು ಗುಂಡಿಯೊಳಗೆ ಇಳಿದಿದ್ದಾನೆ. ಆದರೆ ಸುಮಾರು 10 ಅಡಿ ಆಳವಿದ್ದ ಗುಂಡಿಯಲ್ಲಿ ಆಮ್ಲಜನಕದ ಕೊರತೆ ಉಂಟಾದುದರಿಂದ ಚೋಟು ಅಲ್ಲಿ ಉಸಿರಾಟದ ತೊಂದರೆಯಿಂದ ಒದ್ದಾಡುತ್ತಿದ್ದುದನ್ನು ಕಂಡ ಗಫೂರ್ ಆತನನ್ನು ರಕ್ಷಿಸಲು ಕೆಳಗಿಳಿದಿದ್ದಾರೆ. ಆದರೆ ಇಬ್ಬರೂ ಉಸಿರಾಡಲಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ಪೊಲೀಸರು ಮೃತದೇಹಗಳನ್ನು ಮೇಲಕ್ಕೆ ಎತ್ತಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಜಲಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.