ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.03;

ಮೆಡಿಕಲ್ ಕಾಲೇಜುಗಳು ಮತ್ತು ಡೆಂಟಲ್ ಕಾಲೇಜುಗಳು ಹಾಗೂ ಇತರೆ ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (NEET ) 2020 ಕ್ಕೆ ಆನ್‌ಲೈನ್‌ ರಿಜಿಸ್ಟ್ರೇಷನ್ ಆರಂಭವಾಗಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಮೆಡಿಕಲ್ ಪದವಿ ಆಕಾಂಕ್ಷಿಗಳು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಮಹತ್ವದ ದಿನಾಂಕಗಳಿವು….

  • ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 02-12-2019
  • ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 31-12-2019
  • ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-01-2020
  • ಆನ್‌ಲೈನ್‌ ಅಪ್ಲಿಕೇಶನ್‌ ಮಾಹಿತಿ ತಿದ್ದುಪಡಿ ದಿನಾಂಕ : 15-01-2020 ರಿಂದ 31-01-2020 ವರೆಗೆ
  • ಪ್ರವೇಶ ಪರೀಕ್ಷೆಗೆ ಅಡ್ಮಿಟ್ ಕಾರ್ಡ್‌ ಬಿಡುಗಡೆ : 27-03-2020
  • ಪ್ರವೇಶ ಪರೀಕ್ಷೆ ದಿನಾಂಕ : 03-05-2020
  • ಪ್ರವೇಶ ಪರೀಕ್ಷೆ ಅವಧಿ : 180 ನಿಮಿಷ
  • ಪ್ರವೇಶ ಪರೀಕ್ಷೆ ಫಲಿತಾಂಶ ಬಿಡುಗಡೆ ದಿನಾಂಕ : 04-06-2020

NEET 2020 ಆನ್‌ಲೈನ್‌ ರಿಜಿಸ್ಟ್ರೇಷನ್‌ ಶುಲ್ಕಗಳ ವಿವರ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ರೂ.1500
  • ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂ.1400
  • ಎಸ್‌ಸಿ, ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ : ರೂ.800
  • ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್‌, ಡೆಬಿಟ್ ಕಾರ್ಡ್‌, ನೆಟ್‌ ಬ್ಯಾಂಕಿಂಗ್, ಯುಪಿಐ, ಪೇಟಿಎಂ ಮೂಲಕ ಪಾವತಿಸಬಹುದು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.