ಕೆ.ಎನ್.ಪಿ.ವಾರ್ತೆ,ನವದೆಹಲಿ,ಅ.22;

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕಳೆದ ಶುಕ್ರವಾರ ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ್ದು ಇಂದು ತೀರ್ಪು ಪ್ರಕಟಿಸಿದೆ.

ಸದ್ಯ ಚಿದಂಬರಂ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿರುವ ಕಾರಣ ತಕ್ಷಣವೇ ಬಿಡುಗಡೆ ಭಾಗ್ಯ ಲಭಿಸಿಲ್ಲ. ಐಎನ್‌ಎಕ್ಸ್‌ ಮೀಡಿಯಾಗೆ ವಿದೇಶಿ ದೇಣಿಗೆ ಪಡೆಯಲು ಅನುಮತಿ ನೀಡಲೆಂದು ಯುಪಿಎ ಆಡಳಿತ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ತಮ್ಮ ಪ್ರಭಾವ ಬಳಸಿದ್ದರು ಎನ್ನಲಾಗಿದ್ದು, ಇದಕ್ಕೆ ಪ್ರತಿಯಾಗಿ ಅವರು ಐಎನ್‌ಎಕ್ಸ್‌ ಮೀಡಿಯಾ ಕಂಪನಿಯಿಂದ ತಮ್ಮ ಪುತ್ರ ಕಾರ್ತಿಗೆ ಸಹಾಯ ಮಾಡಲು ಆಗ್ರಹಿಸಿದ್ದರು.

ಜತೆಗೆ ಕಿಕ್‌ಬ್ಯಾಕ್‌ ಕೂಡ ಪಡೆದಿದ್ದರು,’ ಎಂಬ ಆರೋಪ ಆಧರಿಸಿ 2017ರ ಮೇ 15ರಂದು ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿತ್ತು. ಈ ಹಿಂದೆ ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಕಾಂಗ್ರೆಸ್ ನಾಯಕ ಚಿದಂಬರಂ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.