ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.31;

ಪಕ್ಷ ಸಂಘಟನೆ ಮಾಡದ 24 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ವಜಾಗೊಳಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ. ವೈ. ಘೋರ್ಪಡೆ, ಈ ಬ್ಲಾಕ್ ಸಮಿತಿಗಳನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿಯೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಸಹಕರಿಸುತ್ತಿಲ್ಲ. ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಯಾವುದೇ ರೀತಿಯಲ್ಲಿ ಪಕ್ಷ ಬಲವರ್ದನೆ ಕೆಲಸ ಕಾರ್ಯಗಳಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ 24 ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.

ಅಥಣಿ, ತಲಸಂಗ, ಗೋಕಾಕ ನಗರ, ಗೋಕಾಕ ಗ್ರಾಮಾಂತರ, ಯಲ್ಲಾಪುರ, ಮುಂಡಗೋಡ, ಹಿರೇಕೆರೂರು, ರಟ್ಟಿಹಳ್ಳಿ, ಹೊಸಪೇಟೆ, ಕಮಲಾಪುರ, ಚಿಕ್ಕಬಳ್ಳಾಪುರ, ಮಂಚೇನಹಳ್ಳಿ. ಕೆ. ಆರ್ ಪುರ, ಉದಯನಗರ, ಹಾರೋಹಳ್ಳಿ, ಕೆಂಗೇರಿ, ಆರ್ ಆರ್ ನಗರ, ಯಶವಂತಪುರ, ಸಂಪಂಗಿರಾಮನಗರ. ಭಾರತೀನಗರ, ಹೊಸಕೋಟೆ ನಗರ, ಸೊಲಿಬೆಲೆ ನಂದಗುಡಿ, ಜಡಿಗೇನಹಳ್ಳಿ, ಅನುಗೊಂಡನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳನ್ನು ವಿಸರ್ಜಿಸಿ ಅದರ ಅಧ್ಯಕ್ಷರು, ಪದಾಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ವಿ. ವೈ. ಘೋರ್ಪಡೆ ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.