ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.24;

ಕಾಲಮಿತಿಯೊಳಗೆ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ಮುಂದೂಡಿದೆ.

ಕರ್ನಾಟಕ ವಿಧಾನಸಭೆಯಲ್ಲಿ ನಿನ್ನೆ ವಿಶ್ವಾಸಮತ ಯಾಚನೆ ನಡೆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಅರ್ಜಿಯನ್ನು ಮುಂದೂಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ಪೀಠ ಇಂದು ಬೆಳಗ್ಗೆ ಕಲಾಪ ಆರಂಭಿಸಿದಾಗ ಅರ್ಜಿದಾರರು ಮತ್ತು ಪ್ರತಿವಾದಿಗಳ ವಕೀಲರು ಇಲ್ಲದನ್ನು ಕಂಡು, ಗೈರು ಹಾಜರಾತಿಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಅತೃಪ್ತರ ಪರ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಇಂದು ಸುಪ್ರೀಂಕೋರ್ಟ್‌ಗೆ ಹಾಜರಾಗಿರಲಿಲ್ಲ. ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಸಿಂಘ್ವಿ ಗೈರು ಹಾಜರಾಗಿದ್ದನ್ನು ಕಂಡ ಪೀಠ, ನಾವು ಅವರ ಉಪಸ್ಥಿತಿಯಲ್ಲಿ ತೀರ್ಪು ಪ್ರಕಟಿಸುತ್ತೇವೆ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.

ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆಯಲು ಮುಂದಾದ ಪಕ್ಷೇತರರು :

ದೋಸ್ತಿ ಸರ್ಕಾರ ವಿಶ್ವಾಸ ಮತ ಯಾಚನೆ ಮಾಡಿದ್ದು, ಅದರಲ್ಲಿ ವಿಫಲವಾಗಿ ಸರ್ಕಾರ ಉರುಳಿರುವುದರಿಂದ ಪಕ್ಷೇತರರು ತಾವು ಸಲ್ಲಿಸಿದ್ದ ಅರ್ಜಿಯ ವಾಪಸ್ ಪಡೆಯಲು ಮುಂದಾಗಿದ್ದಾರೆ. 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.