ಕೆ.ಎನ್.ಪಿ.ವಾರ್ತೆ,ಕೋಲ್ಕತ್ತ,ಮೇ.14;
ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಭಾರಿ ಹಿಂಸಾಚಾರ ನಡೆದಿರುವುದು ವರದಿಯಾಗಿದೆ.
ಪಶ್ಚಿಮ ಬಂಗಾಳದ 20 ಜಿಲ್ಲೆಗಳಲ್ಲಿ ಪಂಚಾಯತ್ ಚುನಾವಣೆಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದ್ದು, ಈ ವೇಳೆ ಭಾರಿ ಹಿಂಸಾಚಾರ ನಡೆದಿರುವುದು ವರದಿಯಾಗಿದೆ.
ಮತಚಲಾವಣೆ ಪ್ರಕ್ರಿಯೆ ಆರಂಭವಾದ ಕೆಲ ಹೊತ್ತಿನಲ್ಲೇ, ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಹಲವೆಡೆ ಭಾರಿ ಮಾತಿನ ಚಕಮಕಿ, ಘರ್ಷಣೆಗಳು ನಡೆದಿದ್ದು, ಕೂಚ್ ಬಿಹಾರ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೆಲವೆಡೆ ಮಾಧ್ಯಮ ವಾಹನಗಳ ಮೇಲೆ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವುದು ವರದಿಯಾಗಿದೆ.
ಮತ ಚಲಾಯಿಸಲು ಜನರು ಮತಗಟ್ಟೆಗಳ ಬಳಿ ಸರದಿಯಲ್ಲಿ ನಿಂತಿದ್ದಾರೆ. ಭದ್ರತೆಗೆ ಪೊಲೀಸ್, ಅರೆ ಸೇನಾಪಡೆ ನಿಯೋಜಿಸಲಾಗಿದೆ.