ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.28;

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ. ಬಹುಮಾನ ಘೋಷಿಸಿದೆ.

ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆಯಿಂದಾಗಿ ಮಹಾರಾಷ್ಟ್ರದಲ್ಲಿ ನಡೆದಿದ್ದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್‌ ಹಾಗೂ ಗೋವಿಂದ ಪನ್ಸಾರೆ ಅವರ ಹತ್ಯೆ ಪ್ರಕರಣದ ಆರೋಪಿಗಳ ಬಗ್ಗೆಯೂ ಸುಳಿವು ಲಭಿಸಿತ್ತು. ವಿಶೇಷ ತನಿಖಾ ತಂಡ ನೀಡಿದ ಸುಳಿವಿನ ಮೇರೆಗೆ ಸಿಬಿಐನವರು ವಿಚಾರವಾದಿಗಳ ಕೊಲೆ ಹಂತಕರನ್ನು ಬಂಧಿಸಿದ್ದರು.

2017ರ ಸೆಪ್ಟಂಬರ್ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿತ್ತು. ಈ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ 16 ಜನರನ್ನು ಬಂಧಿಸಿತ್ತು.

ಘಟನಾ ಸ್ಥಳದಲ್ಲಿ ಸಣ್ಣದೊಂದು ಸಾಕ್ಷ್ಯವನ್ನೂ ಉಳಿಸದಂತೆ ಅತೀ ಎಚ್ಚರಿಕೆಯಿಂದ ಅಗತ್ಯ ತರಬೇತಿ ಪಡೆದು ನಡೆಸಲಾಗಿದ್ದ ಕೃತ್ಯವನ್ನು ಪತ್ತೆ ಹಚ್ಚುವುದು ದೊಡ್ಡ ಸವಾಲಿನ ಕೆಲಸವಾಗಿತ್ತು.

ಎಷ್ಟೇ ಒತ್ತಡವಿದ್ದರೂ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಡಿಎನ್‌ಎ ಪ್ರೊಫೈಲಿಂಗ್‌ ಹಾಗೂ ಗೇಯ್ಟ್‌ ಅನಾಲಿಸಿಸ್‌ ಥರದ ವೈಜ್ಞಾನಿಕ ಮಾದರಿ ಅನುಸರಿಸಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಎಸ್‌ಐಟಿ ಯಶಸ್ವಿ ಆಗಿದೆ ಎಂದು ಅಭಿಪ್ರಾಯ ಪಟ್ಟಿರುವ ಸರಕಾರ, ಎಸ್‌ಐಟಿ ಮುಖ್ಯಸ್ಥರಾದ ಹೆಚ್ಚುವರಿ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತಂಡಕ್ಕೆ ಅಭಿನಂದನೆ ಸಲ್ಲಿಸುವ ಜತೆಗೆ, 25 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಎಸ್‌ಐಟಿ ಯಲ್ಲಿರುವ 90 ಸಿಬ್ಬಂದಿಗೆ ಈ ನಗದು ಬಹುಮಾನ ಹಂಚಿಕೆ ಆಗಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.