ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.29;

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಮಣಿಪಾಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದರು.

ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆಶಯದಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಬೃಂದಾವನ ನಿರ್ಮಿಸಲಾಗುವುದು. ನಂತರ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಕರೆತರಲಾಗುವುದು, ನಂತರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಮ್ಮ ಮತ್ತು ಸ್ವಾಮೀಜಿ ಒಡನಾಟ ನೆನಪಿಸಿಕೊಂಡು ಭಾವುಕರಾದ ಯಡಿಯೂರಪ್ಪ, ‘ನಾನು ಸ್ವಾಮೀಜಿ ಜೊತೆಗೆ ಕಳೆದ 50 ವರ್ಷಗಳಿಂದ ನಿರಂತರ ಸಂಪರ್ಕದಲ್ಲಿದ್ದೆ. ಅವರು ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗೆ ಹೋದಾಗ ಅವರ ಜೊತೆಗೆ ನಾನೂ ಇದ್ದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂಬ ಕನಸು ಅವರದ್ದಾಗಿತ್ತು. ಈಗ ಸುಪ್ರೀಂ ಕೋರ್ಟ್‌ ಸಹ ಅದೇ ತೀರ್ಪು ನೀಡಿದೆ. ಆದರೆ ರಾಮಮಂದಿರ ನೋಡಲು ಅವರಿಗೆ ಆಗಲಿಲ್ಲ’ ಎಂದು ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.