ಕೆ.ಎನ್.ಪಿ.ವಾರ್ತೆ,ಉಡುಪಿ,ಡಿ.29;

ತೀವ್ರ ಉಸಿರಾಟದ ಸಮಸ್ಯೆ ಹಾಗೂ ನ್ಯೂಮೋನಿಯಾದಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ಕೃಷ್ಣೈಕ್ಯರಾಗಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಶ್ರೀಗಳು ಡಿಸೆಂಬರ್ 20 ರಂದು ಬೆಳಗ್ಗಿನ ಜಾವ ಉಡುಪಿ ಜಿಲ್ಲೆಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.

ಶ್ವಾಸಕೋಶದ ಸೋಂಕು ತಗುಲಿದ್ದ ಶ್ರೀಗಳಿಗೆ ನುರಿತ ತಜ್ಞೆ ಡಾ. ಸುಧಾ ವಿದ್ಯಾಸಾಗರ್ ನೇತೃತ್ವದ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪೇಜಾವರ ಶ್ರೀಗಳು ಇಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಿಧನರಾಗಿದ್ದಾರೆ. 88 ವರ್ಷದ ಪೇಜಾವರ ಶ್ರೀಗಳ ಅಗಲಿಕೆ ರಾಜ್ಯವನ್ನೇ ದುಖಃತಪ್ತರನ್ನಾಗಿಸಿದೆ.

ಶ್ರೀಗಳಿಗೆ ವೆಂಟಿಲೇಟರ್‌ನಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆರಂಭದ ದಿನಗಳಲ್ಲಿ ಚಿಕಿತ್ಸೆಗೆ ಸ್ವಲ್ಪ ಸ್ಪಂದಿಸುತ್ತಿದ್ದರೂ ದಿನದಿಂದ ದಿನಕ್ಕೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರಲಿಲ್ಲ. ಡಿಸೆಂಬರ್ 18 ಶನಿವಾರ ರಾತ್ರಿ ಶ್ರೀಗಳ ಆರೋಗ್ಯ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಮುಂಜಾನೆ 6.55 ಕ್ಕೆ ಮಣಿಪಾಲ ಆಸ್ಪತ್ರೆಯಿಂದ ಉಡುಪಿ ಶ್ರೀಕೃಷ್ಣ ಮಠಕ್ಕೆ ವಿಶೇಷ ಆಂಬ್ಯುಲೆನ್ಸ್ ಮೂಲಕ ಕರೆತರಲಾಯಿತು. ಮಠದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು.

ಈ ನಡುವೆ ಶ್ರೀಗಳ ಆರೋಗ್ಯ ಸುಧಾರಣೆಗೆ ಮಠದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಹಾಗೂ ವಿಶೇಷ ಪೂಜೆ ನಡೆಸಲಾಗಿತ್ತು. ಲಕ್ಷಾಂತರ ಭಕ್ತರು ಸ್ವಾಮೀಜಿ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಭಾನುವಾರ 9.20 ಕ್ಕೆ ಪೇಜಾವರ ಶ್ರೀಗಳು ನಿಧನರಾದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.