ಕೆ.ಎನ್.ಪಿ.ವಾರ್ತೆ,ಕಲಬುರ್ಗಿ,ಸೆ.17;

ರಾಜ್ಯದಲ್ಲಿ ಪೆಟ್ರೋಲ್ -ಡೀಸೆಲ್‌ ಪ್ರತಿ ಲೀಟರ್‌ಗೆ 2 ರೂ. ಕಡಿಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಘೋಷಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲ್ -ಡೀಸೆಲ್‌ ದರ ಇಳಿಕೆ ಕುರಿತು ಪ್ರಕಟಿಸಿದರು. ಜನಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸೆಸ್ ಇಳಿಕೆ ಮಾಡಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

ಹೈದರಾಬಾದ್ ಕರ್ನಾಟಕ ಭಾಗದ ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳು ಒಳಗೊಂಡಂತೆ ಮೊದಲ ಹಂತದಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ಕೃಷಿ ಮತ್ತು ತೋಟಗಾರಿಕೆಯಲ್ಲಿ ಇಸ್ರೇಲ್ ಮಾದರಿಯ ಕೃಷಿ ಪದ್ಧತಿಯನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುವುದು. ಈ ಭಾಗದ ಸಮಸ್ಯೆಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸಿದ್ದ. ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಆಶಯವನ್ನು ಸಾಕಾರಗೊಳಿಸಲು ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದರು.

ಹೈದರಾಬಾದ್ ಕರ್ನಾಟಕ ಭಾಗದ ಜನರ ಸರ್ವೋತೋಮುಖ ಅಭಿವೃದ್ಧಿಗೆ ಬಜೆಟ್‍ನ ಯೋಜನೆಗಳು ಪೂರಕವಾಗಿವೆ. ಈ ಭಾಗದಲ್ಲಿ ಮರಾಠಿ, ತೆಲಗು, ಉರ್ದು ಭಾಷೆಗಳ ಪ್ರಭಾವದಿಂದಾಗಿ ವಿಶಿಷ್ಟ ಸಂಸ್ಕೃತಿ ಮೇಳೈಸಿದೆ. ಐತಿಹಾಸಿಕವಾಗಿಯೂ ಭೌದ್ಧ ,ಇಸ್ಲಾಮಿಕ್, ಜೈನ ಸ್ಮಾರಕಗಳು, ಕೋಟೆಕೊತ್ತಲುಗಳು ಇದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಣಿತರೊಂದಿಗೆ ಚರ್ಚಿಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆ ಸಲ್ಲಿಸಬೇಕೆಂದು ಸಲಹೆ ನೀಡಿದರು. ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸೋದ್ಯಮ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಿದ್ದು, ಈ ಭಾಗಕ್ಕೂ ಅನುಕೂಲವಾಗಲಿದೆ ಎಂದರು.

ಪರಿಶಿಷ್ಟ ಜಾತಿ, ಪಂಗಡದ ಪದವೀಧರರಿಗೆ ಯುಪಿಎಸ್‍ಸಿ, ಕೆಪಿಎಸ್‍ಸಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಕಲಬುರ್ಗಿ ನಗರದಲ್ಲಿ ನೀಡಲಾಗುವುದು. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡಲು ಸರ್ಕಾರ ಕಾರ್ಯಕ್ರಮ ರೂಪಿಸಿದ್ದು, ಬೀದರ್‍ನಲ್ಲಿ ಕೃಷಿ ಯಂತ್ರೋಪಕರಣಗಳ ತಯಾರಿಕೆ, ಕಲಬುರ್ಗಿಯಲ್ಲಿ ಸೋಲಾರ್ ಉಪಕರಣಗಳ ತಯಾರಿಕೆ, ಕೊಪ್ಪಳದಲ್ಲಿ ಎಲೆಕ್ಟ್ರಾನಿಕ್ ಆಟಿಕೆಗಳ ತಯಾರಿಕೆ, ಬಳ್ಳಾರಿಯಲ್ಲಿ ವಸ್ತ್ರೋದ್ಯಮ ಕ್ಲಸ್ಟರ್‍ಗಳನ್ನು ಸ್ಥಾಪಿಸಲಾಗುವುದು.

ಸ್ಥಳೀಯರಿಗೆ ಕೌಶಲ್ಯ ತರಬೇತಿ ನೀಡಿ ಈ ಉದ್ಯಮಗಳಲ್ಲಿ ಉದ್ಯೋಗ ಒದಗಿಸಲು ಕ್ರಮ ಕೈಗೊಂಡಿದ್ದು, ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆ ಸಾಕಾರಗೊಳ್ಳಲಿದೆ ಎಂದರು. ಅಜ್ಞಾನ, ಅನಕ್ಷರತೆ, ಬಡತನ, ಅನಾರೋಗ್ಯ, ಅಪೌಷ್ಠಿಕತೆಗಳಿಂದ ವಿಮೋಚನೆ ಪಡೆಯಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಈ ಭಾಗದ ಕಲ್ಯಾಣಕ್ಕೆ ಸರ್ಕಾರ ಸದಾ ನಿಮ್ಮೊಂದಿಗಿರುತ್ತದೆ ಎಂದು ತಿಳಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.