ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಫೋನ್’ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ.

ರಾಮ ಜನ್ಮ ಭೂಮಿ ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಸದ್ಯದಲ್ಲೇ ತೀರ್ಪು ನೀಡಲಿದ್ದು, ಈ ಹಿನ್ನೆಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಫೋನ್’ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ.

ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಆ ಕುರಿತು ಯಾವುದೇ ಸಂದೇಶ ರೀತಿಯ ಪ್ರಚೋದನಾತ್ಮಕ ಸಂದೇಶ ಕಳಿಸುವುದನ್ನು ಈಗಾಗಲೇ ನಿರ್ಬಂಧಿಸಲಾಗಿದೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಎರಡೂ ಸಮುದಾಯದ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದೇವೆ. ಮಾತುಕತೆ ವೇಳೆ ಧನಾತ್ಮಕ ಪ್ರತಿಕ್ರಿಯೆಗಳು ಬಂದಿವೆ. ಎರಡೂ ಸಮುದಾಯದ ಸದಸ್ಯರು ಸಹಕಾರ ನೀಡಿದ್ದಾರೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳ ಫೋನ್’ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸುವಂತೆ ಸೂಚನೆಗಳು ಬಂದಿವೆ ಎಂದು ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನವೆಂಬರ್ 17 ರಂದು ನಿವೃತ್ತರಾಗುತ್ತಿರುವ ಕಾರಣ ಅದಕ್ಕೂ ಮುನ್ನ ಅಯೋಧ್ಯೆ ವಿವಾದದ ತೀರ್ಪು ಹೊರಬರಬೇಕಿದೆ.

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ.

ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು.

2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ಅಂತಿಮ ಹಂತ ತಲುಪಿದ್ದು, ತೀರ್ಪು ಹೊರಬೀಳಬೇಕಿದೆ. 

ಅಯೋಧ್ಯೆ ತೀರ್ಪು ಅತ್ಯಂತ ಸೂಕ್ಮ ವಿಷಯವಾಗಿದ್ದರಿಂದ ಗೃಹ ಇಲಾಖೆಯು ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೋಲೀಸ್ ಭದ್ರತೆ ಒದಗಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮುಂದಾಗಿದ್ದಾರೆ. 

ಅಯೋಧ್ಯೆ ತೀರ್ಪು ಏನೇ ಬರಲಿ ಅದನ್ನು ಸ್ವೀಕರಿಸಬೇಕು. ಎಲ್ಲ ಪ್ರರ್ಥನಾ ಮಂದಿರಗಳಲ್ಲಿ ಶುಕ್ರವಾರದ ಪ್ರಾರ್ಥನೆಯ ಸಮಯುದಲ್ಲಿ ಇಸ್ಲಾಂ ಧರ್ಮ ಗುರುಗಳು ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಎರಡೂ ಸಮುದಾಯಗಳು ಇಂತಹ ತೀರ್ಮಾನಗಳಿಗೆ ಬಂದಲ್ಲಿ ದೇಶ ಶಾಂತಿಯಿದ್ದಿರುತ್ತೆ.  

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.