ಕೆ.ಎನ್.ಪಿ.ವಾರ್ತೆ,ತುಮಕೂರು,ಜ.01;

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಬಳಿಕ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರಾಷ್ಟ್ರೀಮಟ್ಟದ ಬೃಹತ್ ರೈತ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದ ಹಿನ್ನೆಲೆ ಮಂಗಳವಾರ ತುಮಕೂರಿಗೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಮಾಹಿತಿ ನೀಡಿದರು.

ರೈತ ಸಮಾವೇಶದಲ್ಲಿ ರಾಜ್ಯದ ಮೂವರು ಪ್ರಗತಿಪರ ರೈತರು ಸೇರಿ 28 ಮಂದಿಗೆ ಪ್ರಧಾನಿ ಮೋದಿ ಅವರು ಕೃಷಿಕರ್ಮಣ್ಯೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜೊತೆಗೆ ಪ್ರಧಾಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಿದ್ದಾರೆಂದು ತಿಳಿಸಿದರು.

ಸಮಾವೇಶಕ್ಕೂ ಮುನ್ನ ಅಂದರೆ ಮಧ್ಯಾಹ್ನ 2.15ಕ್ಕೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಮೋದಿಯವರು, ಡಾ.ಶಿವಕುಮಾರ್ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಶ್ರೀಗಳ ವಸ್ತು ಪ್ರದರ್ಶನ ಭವನಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.