ಕೆ.ಎನ್.ಪಿ.ವಾರ್ತೆ,ಸಿನಿಸಮಾಚಾರ;

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸಲಿರುವ ‘ಯುವರತ್ನ’ ಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ ಎಂಬ ಜಾಹೀರಾತು ನೀಡಲಾಗಿದೆ.

‘ರಾಜಕುಮಾರ’ ಖ್ಯಾತಿಯ ಸಂತೋಷ್ ಆನಂದ್ ರಾಮ್ ನಿರ್ದೇಶನ ಮೂರನೇ ಸಿನಿಮಾ ಇದಾಗಿದ್ದು, ಹೊಸ ಕಲಾವಿದರಿಗೆ ಅವಕಾಶ ನೀಡುವ ಉದ್ದೇಶದಿಂದ ಆಡಿಷನ್ ಕರೆಯಲಾಗಿದೆ.

ಮಲ್ಲೇಶ್ವರಂನಲ್ಲಿ ಡಿಸೆಂಬರ್ 1 ರಂದು, ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಆಡಿಷನ್ ನಡೆಯಲಿದ್ದು, 16 ರಿಂದ 24 ವರ್ಷದ ವಯಸ್ಸಿನ ಪ್ರತಿಭೆಗಳಿಗೆ ಮಾತ್ರ ಅವಕಾಶವಿದೆ.

ಯೂತ್ ಎಂಟರ್ ಟೈನಿಂಗ್ ಕಥೆ ಹೊಂದಿರುವ ‘ಯುವರತ್ನ’ ಸಿನಿಮಾದಲ್ಲಿ ಪುನೀತ್ ಕಾಲೇಜ್ ವಿದ್ಯಾರ್ಥಿಯಾಗಿ ನಟಿಸಲಿದ್ದಾರೆ. ಹೀಗಾಗಿ, ಯುವಕರಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅಥವಾ ಹೊಂಬಾಳೆ ಫಿಲ್ಮ್ ಬ್ಯಾನರ್ ಫೇಸ್ ಬುಕ್ ಅಥವಾ ಟ್ವಿಟ್ಟರ್ ಪೇಜ್ ನೋಡಬಹುದಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.