ಕೆ.ಎನ್.ಪಿ.ವಾರ್ತೆ,ನವದೆಹಲಿ,ಮಾ.29;
ಪರೀಕ್ಷೆ ಆರಂಭಕ್ಕೂ ಮುನ್ನ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದರಿಂದ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯಗಳ ಮರು ಪರೀಕ್ಷೆ ನಡೆಸಲು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು ತೀರ್ಮಾನಿಸಿದೆ.
ದೇಶದಾದ್ಯಂತ ಬುಧವಾರ ನಡೆದ 10ನೇ ತರಗತಿಯ ಗಣಿತ ಮತ್ತು ಮಾ.26ರಂದು ನಡೆದಿದ್ದ 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಪರೀಕ್ಷೆ ಆರಂಭವಾಗುವ ಮೊದಲೇ ಸೋರಿಕೆಯಾಗಿತ್ತು ಎಂಬ ವರದಿಗಳ ಹಿನ್ನೆಲೆಯಲ್ಲಿ, 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯಗಳ ಮರು ಪರೀಕ್ಷೆ ನಡೆಸಲು ಕೇಂದ್ರ ಪ್ರೌಢಶಿಕ್ಷ ಣ ಮಂಡಳಿ (ಸಿಬಿಎಸ್‌ಇ) ತೀರ್ಮಾನಿಸಿದ್ದು, ಮರು ಪರೀಕ್ಷೆಯ ದಿನಾಂಕ ಮತ್ತು ಇತರ ಮಾಹಿತಿಯನ್ನು ವಾರದೊಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.